ಕಲ್ಪ ಮೀಡಿಯಾ ಹೌಸ್ | ಪುತ್ತೂರು |
ಕ್ಲಿನಿಕ್ ಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಪುತ್ತೂರಿನ ದರ್ಬೆ ಎಂಬಲ್ಲಿ ನಡೆದಿದೆ.
ಡಾ. ರಾಮ್‌ಮೋಹನ್ ಎಂಬವರಿಗೆ ಸೇರಿದ ಕ್ಲಿನಿಕ್ ಮುಂಭಾಗದ ರಸ್ತೆಯ ಪಾರ್ಕಿಂಗ್ ಶುಲ್ಕ ಸಂಗ್ರಹಿಸುವ ಇಬ್ರಾಹಿಂ ಎಂಬ ವ್ಯಕ್ತಿ, ಪರಿಚಯದವರಿಗೆ ಬೇಗ ಹೋಗುವ ಟೋಕನ್ ನೀಡದಿರುವುದಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.
ಕ್ಲಿನಿಕ್ ಸಿಬ್ಬಂದಿ ಶ್ರೀಕಾಂತ್ ಎಂಬವರ ಮೇಲೆ ಹಲ್ಲೆ ನಡೆಸಿ, ಕ್ಲಿನಿಕ್ ನ ಪೀಠೋಪಕರಣ ಹಾನಿ ಮಾಡಿದ್ದಾನೆ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದ್ದಾರೆ .ಈ ಬಗ್ಗೆ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















