ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಪುತ್ತೂರು: ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಎಷ್ಟರ ಮಟ್ಟಿಗೆ ವಿದ್ಯಾರ್ಥಿಗಳು ತೊಡಗಿಸಿಕೊಂಡಿದ್ದಾರೆ ಎಂಬುದರ ಮೇಲೆ ವಿದ್ಯಾರ್ಥಿಗಳ ಮುಂದಿನ ಜೀವನದ ಬೆಳವಣಿಗೆ ಅವಲಂಭಿಸಿರುತ್ತದೆ. ಕಾಲೇಜಿನಲ್ಲಿ ಲಭ್ಯವಿರುವ ಎಲ್ಲಾ ರೀತಿಯ ಪಠ್ಯೇತರ ಅವಕಾಶವನ್ನು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಹೇಳಿದರು.
ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ಐಕ್ಯೂಎಸಿ ಘಟಕ ಮತ್ತು ವಾಣಿಜ್ಯ ವಿಭಾಗದಿಂದ ಆಯೋಜಿಸಲಾಗಿದ್ದ ವಾಣಿಜ್ಯ ಸಂಘವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ವಿವೇಕಾನಂದ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಸಂಯೋಜಕಿ ರವಿಕಲಾ ಮಾತನಾಡಿ, ಪೋಷಕರು ಮತ್ತು ಶಿಕ್ಷಕರು ಕೊಡುವಂತಹ ಮೌಲ್ಯಯುತವಾದ ಶಿಕ್ಷಣವೇ ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಉಡುಗೊರೆಯಾಗಿದೆ. ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡು, ಜೀವನ ಕಟ್ಟಿಕೊಳ್ಳಬೇಕು. ವಿದ್ಯಾರ್ಥಿಯು ಜೀವನದಲ್ಲಿ ಸವಾಲುಗಾರನಾಗಿರಬೇಕು. ನಿಮಗೆ ನೀವೇ ಆದರ್ಶ ವ್ಯಕ್ತಿತ್ವದವರಾಗಿ ನಿಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ವಾಣಿಜ್ಯ ಸಂಘದ ಸಂಯೋಜಕ ಗೌತಮ್ ಪೈ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅಕ್ಷತಾ ಮತ್ತು ಬಳಗ ಪ್ರಾರ್ಥಿಸಿದರು. ವಾಣಿಜ್ಯ ಸಂಘದ ಅದ್ಯಕ್ಷೆ ಸ್ವರ್ಣಲಕ್ಷೀ ಸ್ವಾಗತಿಸಿ, ಸಂಘದ ಕಾರ್ಯದರ್ಶಿ ಸುಶಾಂತ್ ವಂದಿಸಿದರು. ವಿದ್ಯಾರ್ಥಿನಿ ಆಕಾಂಕ್ಷ ಎಚ್. ಕಾರ್ಯಕ್ರಮವನ್ನು ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post