ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿ, ಹೀನಾಯವಾಗಿ ಸೋತು ಸುಣ್ಣವಾಗಿವೆ. ಇದೇ ವೇಳೆ ನಿನ್ನೆ ಸಂಸತ್‌ನಲ್ಲಿ ಮಾತನಾಡುವ ಬರದಲ್ಲಿ ರಾಫೆಲ್ ಡೀಲ್ ವಿಚಾರದಲ್ಲಿ ಸರ್ಕಾರದ ವಿರುದ್ಧ ತೆಗಳಿದ ರಾಹುಲ್‌ಗೆ ಈಗ ಸಂಕಷ್ಟ ಎದುರಾಗಿದೆ.
ರಾಫೆಲ್ ಡೀಲ್ ಕುರಿತಾಗಿ ನಿನ್ನೆ ಸಂಸತ್‌ನಲ್ಲಿ ಮಾತನಾಡಿದ್ದ ರಾಹುಲ್, ಡೀಲ್ ಬಗ್ಗೆ ಪ್ರಧಾನಿ ಮೋದಿ ಮೌನವಾಗಿದ್ದಾರೆ. ಯುಪಿಎ ಅವಧಿಯಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಆದರೆ ಈಗ ಅದು 1600 ಕೋಟಿ ರೂ. ಹೆಚ್ಚಿದ್ದು, ಈ ಬಗ್ಗೆ ಮಾಹಿತಿ ನೀಡಲು ನಿರ್ಮಲಾ ಸೀತಾರಾಮನ್ ಅವರು ನಿರಾಕರಿಸಿದ್ದಾರೆ ಮತ್ತು ಇದೊಂದು ರಹಸ್ಯ ಷರತ್ತು ಎಂದು ಹೇಳಿದ್ದಾರೆ. ಆದರೆ ನಾನು ಫ್ರಾನ್‌ಸ್ ಅಧ್ಯಕ್ಷರನ್ನು ಭೇಟಿ ಮಾಡಿದಾಗ ರಹಸ್ಯ ಷರತ್ತಿನ ಬಗ್ಗೆಯೂ ಪ್ರಶ್ನಿಸಿದ್ದೆ. ಆದರೆ ಅಂತಹ ಯಾವುದೇ ಷರತ್ತಿಲ್ಲ ಎಂದು ಅವರು ಹೇಳಿದ್ದರು. ಪ್ರಧಾನಿ ನರೇಂದ್ರ ಮೋದಿ ಒತ್ತಡದಿಂದಾಗಿ ನಿರ್ಮಲಾ ಸೀತಾರಾಮನ್ ಅವರು ದೇಶಕ್ಕೆ ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಇಂದು ಲೋಕಸಭೆಯಲ್ಲಿ ಆರೋಪಿಸಿದ್ದರು.
ಈ ಹಿನ್ನೆಲೆಯಲ್ಲಿ ಅಧಿಕೃತ ಪ್ರತಿಕ್ರಿಯೆ ನೀಡಿರುವ ಫ್ರಾನ್ಸ್ ಸರ್ಕಾರ, ರಾಹುಲ್ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಒಪ್ಪಂದದ ಅಂಶಗಳನ್ನು ಬಹಿರಂಗಪಡಿಸುವಂತಿಲ್ಲ ಎಂದಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಭಾರತದ ಸಂಸತ್‌ನಲ್ಲಿ ಮಾತನಾಡಿ, 36 ಯುದ್ಧ ವಿಮಾನ ಖರೀದಿಯ ಒಪ್ಪಂದದಲ್ಲಿ ಯಾವುದೇ ರಹಸ್ಯ ಷರತ್ತು ಇಲ್ಲ ಎಂಬ ಹೇಳಿಕೆ ನೀಡಿರುವುದನ್ನು ಗಮನಿಸಿದ್ದೇವೆ. ಆದರೆ ಒಪ್ಪಂದ ಅತ್ಯಂತ ಸೂಕ್ಷ್ಮವಾಗಿದ್ದು, ಅದರ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಫ್ರಾನ್ಸ್ ಮತ್ತು ಭಾರತ 2008ರಲ್ಲಿ ರಕ್ಷಣಾ ಒಪ್ಪಂದ ಪೂರ್ಣಗೊಳಿಸಿದ್ದು, ಇದು ಉಭಯ ದೇಶಗಳ ಭದ್ರತೆ ಮತ್ತು ರಕ್ಷಣಾ ಸಾಧನದ ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಪರಿಣಾಮ ಬೀರುವ ವಿಚಾರವಾಗಿರುವುದರಿಂದ ಎರಡೂ ದೇಶಗಳು ಒಪ್ಪಂದದ ಮಾಹಿತಿಯನ್ನು ರಕ್ಷಿಸಲು ಬದ್ಧವಾಗಿ ಎಂದು ತಿಳಿಸಿರುವುದು ರಾಹುಲ್ ಗೆ ತೀವ್ರ ಹಿನ್ನಡೆಯಾಗಿದೆ.
ಇನ್ನೊಂದೆಡೆ ಬಿಜೆಪಿ ನೋಟೀಸ್
ಇನ್ನು ರಾಫೆಲ್ ಡೀಲ್ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ಸಂಸತ್‌ನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡಿದ ಹಿನ್ನೆಲೆಯಲ್ಲಿ ರಾಹುಲ್ ವಿರುದ್ಧ ಬಿಜೆಪಿ ಪ್ರಿವಿಲೈಜ್ ನೋಟೀಸ್ ನೀಡಲು ಮಂಡನೆ ಮಾಡಿದೆ.
ಇನ್ನು ಈ ಕುರಿತಂತೆ ಮಾತನಾಡಿರುವ ಕೇಂದ್ರ ಸಚಿವ ಅನಂತಕುಮಾರ್, ಕಾಂಗ್ರೆಸ್ ಅಧ್ಯಕ್ಷರ ಮಾತುಗಳು ಮಕ್ಕಳಾಡುವಂತಿತ್ತು ಎಂದು ಗೇಲಿ ಮಾಡಿದ್ದಾರೆ.

















