ಬೆಂಗಳೂರು: ಮೇ 23ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿಸಲು ರಾಗಾ ಫಾರ್ ಪಿಎಂ ಮಿಷನ್ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ದೇಶವನ್ನು ಮುನ್ನಡೆಸಲು ರಾಹುಲ್ ಗಾಂಧಿ ಸಮರ್ಥರು. ಹೀಗಾಗಿ, ಅವರನ್ನು ಬೆಂಬಲಿಸಲು ಪ್ರಾದೇಶಿಕ ಪಕ್ಷಗಳೆಲ್ಲಾ ಒಂದಾಗಿದ್ದು, ಫಲಿತಾಂಶದ ನಂತರ ದೇವೇಗೌಡರು ಎಲ್ಲ ವಿರೋಧ ಪಕ್ಷಗಳ ಮುಖಂಡರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎಂದಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಿಎಂ ಆಗಲು ಜೆಡಿಎಸ್ ಸಂಪೂರ್ಣ ಬೆಂಬಲವಿದೆ. ಮೋದಿ ನೇತೃತ್ವದ ಎನ್’ಡಿಎ ಮಿತ್ರ ಕೂಟ ಸದ್ಯ ಇರುವ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳು ಅವರ ಹತಾಶೆಯನ್ನು ತೋರಿಸುತ್ತಿವೆ. ಜನರಿಗೆ ಅವರ ಬಗ್ಗೆ ಸಂಶಯ ಮೂಡಿದೆ ಎಂದಿದ್ದಾರೆ.







Discussion about this post