ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಡಿ.ವಿ. ಸುಧೀಂದ್ರ ಅವರ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ವತಿಯಿಂದ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಈ ಬಾರಿ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಸೇರಿದಂತೆ 11 ಮಂದಿಗೆ ಪಾತ್ರವಾಗಿದ್ದಾರೆ.
ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದ್ದರು. ಎರಡು ಪ್ರಶಸ್ತಿಯೊಂದಿಗೆ ಆರಂಭವಾದ ಈ ಪರಿಪಾಠ ಈಗ ಪ್ರಶಸ್ತಿಗಳ ಸಂಖೆ 11ಕ್ಕೇರಿದೆ.
ಪ್ರಸಕ್ತ ವರ್ಷ ಸಂಸ್ಥೆಯ 42ನೆಯ ವಾರ್ಷಿಕೋತ್ಸವ ಹಾಗೂ 18ನೆಯ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಜ.25ರಂದು ಸಂಜೆ 5.30ಕ್ಕೆ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಲಿದೆ ಎಂದು ಪತ್ರಿಕಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ತಿಳಿಸಿದ್ದಾರೆ.
ಪ್ರಶಸ್ತಿಗೆ ಪಾತ್ರರಾದ ಗಣ್ಯರು
Discussion about this post