ಶಿವಮೊಗ್ಗ: ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಜಿಲ್ಲೆಯಾದ್ಯಂತ ನಿರಂತರವಾಗಿ ಪ್ರಚಾರ ಕಾರ್ಯದಲ್ಲಿ ನಿರತವಾಗಿದ್ದು, ಭಾರೀ ಜನಸ್ಪಂದನೆ ವ್ಯಕ್ತವಾಗಿದೆ.

ನಿನ್ನೆ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತ್ತೂರಿನಲ್ಲಿ ಪ್ರಚಾರ ಪ್ರವಾಸ ಮಾಡಿ ಮತ ಯಾಚನೆ ಮಾಡಿದರು. ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಅರಗ ಜ್ಞಾನೇಂದ್ರ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್, ಮುಖಂಡರುಗಳಾದ ಎಸ್. ದತ್ತಾತ್ರಿ, ಎಸ್.ಎನ್. ಚೆನ್ನಬಸಪ್ಪ, ಸುಭಾಷ್, ಸುವರ್ಣ ಶಂಕರ್, ಶಿವನಂಜಪ್ಪ ಇನ್ನಿತರ ಪ್ರಮುಖರು ಪಾಲ್ಗೊಂಡಿದ್ದರು.
ಆನಂತರ ಹಸೂಡಿ ಶಕ್ತಿ ಕೇಂದ್ರದ ಹಾರೋಬೆನವಳ್ಳಿಯಲ್ಲಿ ಸಭೆ ನಡೆಸಿದ ರಾಘವೇಂದ್ರ ಮತ ಯಾಚನೆ ಮಾಡಿದರು.

ಶಾಸಕ ಕೆ.ಬಿ. ಅಶೋಕ್ ನಾಯ್ಕ, ಮುಖಂಡರಾದ ಎಸ್. ದತ್ತಾತ್ರಿ, ಮಂಡಲದ ಅಧ್ಯಕ್ಷ ಜಿ.ಈ. ವಿರೂಪಾಕ್ಷಪ್ಪ, ಜಿಲ್ಲಾ ಪಂಚಾಯತ್ ಸದಸ್ಯರಾದ ವೀರಭದ್ರಪ್ಪ ಪೂಜಾರ್, ಮಹಾನಗರ ಪಾಲಿಕೆಯ ಸದಸ್ಯ ಧೀರಾಜ್ ಹೊನ್ನವಿಲೆ, ತಾಲೂಕು ಪಂಚಾಯಿತಿ ಸದಸ್ಯ ಕೆ.ಜಿ. ಶ್ರೀಧರ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷೆ ಪವಿತ್ರ ರಾಮಯ್ಯ ಇನ್ನಿತರ ಪ್ರಮುಖರು ಪಾಲ್ಗೊಂಡಿದ್ದರು.

ಅಲ್ಲದೇ, ಅನವಟ್ಟಿಯ ಕೋಟಿಪುರದಲ್ಲೂ ಸಹ ರಾಘವೇಂದ್ರ ಪ್ರಚಾರ ನಡೆಸಿದ್ದು, ಇವರಿಗೆ ಶಾಸಕ ಕುಮಾರ್ ಬಂಗಾರಪ್ಪ, ಪದ್ಮನಾಭ್ ಭಟ್, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ಸಾಥ್ ನೀಡಿದ್ದರು.
















