ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಮುಕ್ತಾಯವಾಗಿದ್ದು, ಆನಂತರ ಸಂಸದರು ಸೇರಿದಂತೆ ಜಿಲ್ಲೆಯ ಗಣ್ಯರು ಅಂತಿಮ ದರ್ಶನ ಪಡೆದರು.

ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯವಾದ ನಂತರ ಮೆಗ್ಗಾನ್ ಆಸ್ಪತ್ರೆಯ ಅವರಣದಲ್ಲಿ ಮೃತದೇಹವನ್ನಿರಿಸಿದ ಪೆಟ್ಟಿಗೆಗೆ ರಾಷ್ಟ್ರ ಧ್ವಜ ಹೊದಿಸಿ, ಸರ್ಕಾರಿ ಗೌರವ ಸಲ್ಲಿಸಲಾಯಿತು.
ಸಂಸದ ಬಿ.ವೈ. ರಾಘವೇಂದ್ರ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಸ್ಬುಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಮೇಯರ್ ಸುವರ್ಣಾ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಪ್ರಮುಖರಾದ ಎಸ್. ದತ್ತಾತ್ರಿ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















