ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಬೈಂದೂರು ಕ್ಷೇತ್ರಕ್ಕೆ ಸಂಸದ ಬಿ.ವೈ. ರಾಘವೇಂದ್ರ #BYRaghavendra ಅವರ ಕೊಡುಗೆ ಶೂನ್ಯವಾಗಿದೆ ಎಂದು ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ #BMSukumaraShetty ಕಿರಿ ಕಾರಿದರು.
ಉಡುಪಿ #Udupi ಜಿಲ್ಲೆಯ ಬೈಂದೂರು ತಾಲೂಕಿನ ನಾಡ ಗ್ರಾಮದಲ್ಲಿ ಆಯೋಜಿಸಿದ್ದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ದೇಶದಲ್ಲಿ ಬಿಜೆಪಿ ಪಕ್ಷ ನಂಬಿಕೊಂಡು ನಾವು ಮೋಸ ಹೋಗಿದ್ದು ಸಾಕು. ಬಿಜೆಪಿ ಭಾರತವನ್ನು ವಿನಾಶದತ್ತ ಕೊಂಡೊಯ್ಯುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದ ಪರಿಸ್ಥಿತಿ, ಜನರ ಬದುಕು, ರಾಜಕೀಯ ಅವನತಿ ಗಮನದಲ್ಲಿ ಇಟ್ಟುಕೊಂಡು ಕಾಂಗ್ರೆಸ್ ಬೆಂಬಲಿಸಲು ಮುಂದಾಗಬೇಕು ಎಂದರು.
ಜನ ಸಾಮಾನ್ಯರಿಗೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಕೇಂದ್ರ ಸರ್ಕಾರದ ಭರವಸೆಗಳು ಹುಸಿಯಾಗಿವೆ. ಜನಸಾಮಾನ್ಯರಬದುಕು ಹದಗೆಟ್ಟಿದೆ. ಬೈಂದೂರು ಕ್ಷೇತ್ರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರ ಕೊಡುಗೆ ಶೂನ್ಯ. ಇಲ್ಲಿ ಅಭಿವೃದ್ಧಿ ಆಗಿದ್ದರೆ, ಅದು ಕಾಂಗ್ರೆಸ್ ಆಡಳಿತದಲ್ಲಿ ಮಾತ್ರ ಎಂದರು.
ಬಿಜೆಪಿ ಪಕ್ಷ ಮೇಲ್ಜಾತಿಗಳಿಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಸಾಮಾನ್ಯರ ಬಗ್ಗೆ ಕಾಳಜಿ ಇಲ್ಲ. ಇದು ನನ್ನ ಅನುಭವದ ಮಾತು. ಕೇಂದ್ರದ ಬಿಜೆಪಿ ಸರ್ಕಾರ ಉದ್ಯಮಿಗಳ 11 ಲಕ್ಷ ಕೋಟಿ ಹಣ ಮನ್ನಾ ಮಾಡಿದೆ. ಇದು ಜನ ಸಾಮಾನ್ಯರಿಗೆ ಅರಿವಾಗುತ್ತಿಲ್ಲ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – editor@kalpa.news info@kalpa.news



















