Friday, September 29, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ರಾಘವೇಶ್ವರ ಶ್ರೀಗಳ ಸಂಕಲ್ಪ

ತಕ್ಷಶಿಲೆಯ ಪುನರವತರಣಕ್ಕೆ ಧಾರಾ ರಾಮಾಯಣ

June 19, 2019
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಬೆಂಗಳೂರು: ವಿಷ್ಣುಗುಪ್ತ (ಚಾಣಕ್ಯ) ಹೆಸರಿನ ವಿಶ್ವವಿದ್ಯಾಪೀಠದ ಮಹಾಸಂಕಲ್ಪದ ಸಾಕಾರಕ್ಕಾಗಿ ಶ್ರೀಮದಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀಮಹಾಸ್ವಾಮಿಗಳು ಈ ತಿಂಗಳ 20ರಿಂದ ಸಮಗ್ರ ರಾಮಾಯಣ ಪ್ರವಚನ ಆರಂಭಿಸಲಿದ್ದಾರೆ.

ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಪೀಠಾರೋಹಣ ಮಾಡಿ 25 ವಸಂತಗಳು ತುಂಬಿದ್ದು, ಸುವರ್ಣಯುಗ ಆರಂಭದ ನೆನಪಿಗಾಗಿ ಈ ವಿಶಿಷ್ಟ ಕೊಡುಗೆಯನ್ನು ಶ್ರೀರಾಮಚಂದ್ರಾಪುರಮಠ ಸಮಾಜಕ್ಕೆ ನೀಡುತ್ತಿದೆ. ದೇಸಿ ಗೋವಂಶ ರಕ್ಷಣೆಗಾಗಿ ಕಳೆದ ವರ್ಷ ವಿಶ್ವದ ಏಕೈಕ ಗೋಸ್ವರ್ಗವನ್ನು ಸಮಾಜಕ್ಕೆ ಧಾರೆ ಎರೆದ ಶ್ರೀಮಠ ಇದೀಗ ಆದಿಗುರು ಶಂಕರಾಚಾರ್ಯರಿಗೆ ಕಿರುಗಾಣಿಕೆಯಾಗಿ ದೇಸಿ ವಿದ್ಯೆಗಳ ಪುನರುತ್ಥಾನಕ್ಕೆ ಮುಡಿಪಾಗಿರುವ ವಿಶ್ವವಿದ್ಯಾಪೀಠವನ್ನು ಸಮರ್ಪಿಸುತ್ತಿದೆ.

“ಬಾಳದಾರಿಗೆ ರಾಮದೀವಿಗೆ” ಎಂಬ ಘೋಷವಾಕ್ಯದೊಂದಿಗೆ ಬೆಂಗಳೂರು ಗಿರಿನಗರದಲ್ಲಿರುವ ರಾಮಾಶ್ರಮದಲ್ಲಿ ಪ್ರತಿದಿನ ಸಂಜೆ 6.45ರಿಂದ 8.15ರವರೆಗೆ ಆರು ತಿಂಗಳ ಕಾಲ ಎಡೆಬಿಡದೇ ಸಮಗ್ರ ರಾಮಾಯಣ ಪ್ರವಚನವನ್ನು ಶ್ರೀಗಳು ಅನುಗ್ರಹಿಸುವರು.

ಶ್ರೀಕರಾರ್ಚಿತ ಶ್ರೀರಾಮದೇವರ ಸನ್ನಿಧಿಯಲ್ಲೇ ಶ್ರೀಗಳು ಸಮಗ್ರ ರಾಮಾಯಣ ಅನುಗ್ರಹಿಸುತ್ತಿರುವುದು ಶ್ರೀಮಠದ ಇತಿಹಾಸದಲ್ಲೇ ಪ್ರಥಮ. ಧಾರಾ ರಾಮಾಯಣದ ಮೂಲಕ ಇಡೀ ಸಮಾಜದಲ್ಲಿ ಧರ್ಮಜಾಗೃತಿ ಹಾಗೂ ದೇಶದ ಸಂಸ್ಕøತಿಯ ಪುನರುತ್ಥಾನಕ್ಕೆ ನಾಂದಿ ಹಾಡುವ ವಿಶ್ವವಿದ್ಯಾಪೀಠವೊಂದರ ಸ್ಥಾಪನೆಯ ಅಗತ್ಯತೆ- ಅನಿವಾರ್ಯತೆ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವ ಸಂಕಲ್ಪ ಶ್ರೀಗಳದ್ದು. ಧಾರಾ ರಾಮಾಯಣದ ಮೂಲಕ ಈ ಸಂದೇಶವನ್ನು ಸಮಸ್ತ ಕನ್ನಡ ಕುಲಕೋಟಿಗೆ ತಲುಪಿಸುವ ಕಾರ್ಯಯೋಜನೆ ಹಮ್ಮಿಕೊಳ್ಳಲಾಗಿದೆ.

ಭರತಖಂಡದ ಸುವರ್ಣಯುಗದ ಕುರುಹಾಗಿ ಉಳಿದಿರುವ ತಕ್ಷಶಿಲೆ ವಿಶ್ವವಿದ್ಯಾನಿಲಯದ ಪುನರವತರಣ ಮತ್ತು ಧರ್ಮಯೋಧರ ಸೃಷ್ಟಿ ಈ ಯೋಜಿತ ವಿಶ್ವವಿದ್ಯಾಪೀಠದ ಮೂಲಧ್ಯೇಯವಾಗಿದೆ.


ಉದಾಹರಣೆಗೆ ಸಾಮವೇದ ಒಂದು ಕಾಲದಲ್ಲಿ ಸಹಸ್ರಶಾಖೆಗಳನ್ನು ಹೊಂದಿತ್ತು. ಆದರೆ ಈಗ ಉಳಿದಿರುವುದು ಮೂರು ಶಾಖೆಗಳು ಮಾತ್ರ. ಇಂದು ಭಾರತೀಯ ಮೂಲದ ಪ್ರತಿಯೊಂದು ವಿದ್ಯೆಯ ಕಥೆಯೂ ಹೀಗೆಯೇ ಆಗಿದೆ. ನಮ್ಮ ಪೂರ್ವಜರು ಕಂಡುಕೊಂಡ ಒಂದೊಂದು ವಿದ್ಯೆಯೂ ಪಾಶ್ಚಿಮಾತ್ಯ ದಾಳಿಯ ಪ್ರಭಾವಕ್ಕೆ ಸಿಲುಕಿ ರೂಪುಗೆಟ್ಟಿದೆ ಅಥವಾ ಅರ್ಥ ಕಳೆದುಕೊಂಡಿದೆ. ಉಳಿದವು ಅಳಿವಿನ ಅಂಚಿನಲ್ಲಿವೆ. ಅಳಿದುಳಿದ ವಿದ್ಯೆಗಳ ಪುನರುಜ್ಜೀವನ ಉದ್ದೇಶಿತ ವಿಶ್ವವಿದ್ಯಾಪೀಠದ ಉದ್ದೇಶ.

25 ವರ್ಷಗಳ ಹಿಂದೆ ಪೀಠಾರೋಹಣದ ದಿನವೇ ಶ್ರೀಶಂಕರರ ನೆನಪಿನಲ್ಲಿ ವಿಶ್ವವಿದ್ಯಾನಿಲಯ ಸ್ಥಾಪಿಸುವ ಘೋಷಣೆಯನ್ನು ಶ್ರೀಗಳು ಮಾಡಿದ್ದರು. ಶ್ರೀಗಳ ಸಂಕಲ್ಪ ಸಾಕಾರವಾಗುವ ಕಾಲ ಇದೀಗ ಸನ್ನಿಹಿತವಾಗಿದೆ. ಆದ್ಯಶಂಕರರು ನಮ್ಮ ಮೂಲಮಠವನ್ನು ಸ್ಥಾಪಿಸಿದ ಅಶೋಕೆಯಲ್ಲಿ ಕುಲಗುರುಗಳ ವಾಸಕ್ಕಾಗಿಯೇ ಶಿಷ್ಯರು ಕಲಾತ್ಮಕ ರೀತಿಯಲ್ಲಿ ವಿಶಿಷ್ಟವಾಗಿ ಪಾರಂಪರಿಕ ಸ್ವಯಂ ನಿವಾಸವನ್ನೇ ಶ್ರೀಗಳು ವಿಶ್ವವಿದ್ಯಾಪೀಠಕ್ಕೆ ಮೊದಲ ಸಮರ್ಪಣೆಯಾಗಿ ಸಲ್ಲಿಸಲು ಶ್ರೀಗಳು ಸಂಕಲ್ಪಿಸಿದ್ದಾರೆ.

ವಿಶ್ವವಿದ್ಯಾಪೀಠ
ದಾಖಲೆ ಹತ್ತು ತಿಂಗಳ ಅವಧಿಯಲ್ಲಿ ಪರಿಪೂರ್ಣ ವಿಶ್ವವಿದ್ಯಾಪೀಠವನ್ನು ಸಮಾಜಕ್ಕೆ ಸಮರ್ಪಿಸಲು ಉದ್ದೇಶಿಸಲಾಗಿದೆ. ಭಾರತೀಯ ವಿದ್ಯೆಗಳನ್ನು ಉಳಿಸಿ ಬೆಳೆಸುವುದು ಹಾಗೂ ದೇಶರಕ್ಷಣೆ- ಧರ್ಮರಕ್ಷಣೆಗೆ ಬದ್ಧರಾದ, ಸಂಸ್ಕøತಿಯ ಆಳ ಅರಿವು ಇರುವ ಧರ್ಮಯೋಧರನ್ನು ಸಿದ್ಧಪಡಿಸುವುದು ಈ ವಿಶ್ವವಿದ್ಯಾಪೀಠದ ಉದ್ದೇಶ. ತಕ್ಷಶಿಲೆ ವಿಶ್ವವಿದ್ಯಾನಿಲಯದಲ್ಲಿ ಆಚಾರ್ಯ ವಿಷ್ಣುಗುಪ್ತ ಚಾಣಕ್ಯನು ಧರ್ಮಯೋಧ ಚಂದ್ರಗುಪ್ತನನ್ನು ಸೃಷ್ಟಿಸಿ ಆತನ ಮೂಲಕ ನಂದನ ಅಂಧಕಾರಶಾಸನವನ್ನು ಕೊನೆಗೊಳಿಸಿ ಧರ್ಮಸಾಮ್ರಾಜ್ಯ ಉದಯಕ್ಕೆ ಕಾರಣನಾದಂತೆ ವಿಶ್ವವಿದ್ಯಾಪೀಠದ ಮಡಿಲಲ್ಲಿ ವಿಶ್ವವಿಜಯೀ ವಿದ್ಯಾವೀರರನ್ನು ಸೃಜಿಸುವ ಮೂಲಕ ಭಾರತವರ್ಷದಲ್ಲಿ ಮತ್ತೊಮ್ಮೆ ರಾಮರಾಜ್ಯವನ್ನು ಉದಯಗೊಳಿಸುವುದು, ಧರ್ಮಪ್ರಭುತ್ವವನ್ನು ಮರಳಿ ಸ್ಥಾಪಿಸುವುದು ಯೋಜಿತ ವಿಶ್ವವಿದ್ಯಾಪೀಠದ ಧ್ಯೇಯವಾಗಿದೆ.

ಎಲ್ಲಿ?
ಶಂಕರಾಚಾರ್ಯರು ಮೂರು ಬಾರಿ ಭೇಟಿ ನೀಡಿದ ಮತ್ತು ಹಲವು ತಿಂಗಳ ಕಾಲ ವಾಸವಿದ್ದ, ಶಂಕರರ ಜ್ಞಾನಶಿಶು ಎನಿಸಿದ ಶ್ರೀರಾಮಚಂದ್ರಾಪುರಮಠದ ಮೂಲಸ್ಥಾನ, ಗೋಕರ್ಣ ಸಮೀಪದ ಅಶೋಕೆಯ ಸ್ವಚ್ಛ, ಸುಂದರ ಪರಿಸರದಲ್ಲಿ ನೂತನ ವಿಶ್ವವಿದ್ಯಾಪೀಠ ತಲೆ ಎತ್ತಲಿದೆ. ವಿಶ್ವದಲ್ಲಿ ಎಲ್ಲೂ ಇಲ್ಲದಂಥ ಅಪೂರ್ವ ವಿದ್ಯಾಪೀಠ ಆದಿಶಂಕರರ ನೆನಪಿನಲ್ಲಿ ಅವರಿಗೇ ಸಮರ್ಪಣೆಯಾಗಲಿದೆ.

ಪಾರಂಪರಿಕ ವಾಸ್ತುಶಿಲ್ಪವನ್ನು ಒಳಗೊಂಡ ಈ ವಿಶಿಷ್ಟ ವಿದ್ಯಾಪೀಠದಲ್ಲಿ ಭಾರತೀಯ ವಿದ್ಯಾವಿಶ್ವವೇ ಅಧ್ಯಯನ ವಸ್ತು. ಭಾರತೀಯ ಸಂಸ್ಕøತಿಯ ಮೂಲಾಧಾರ ಎನಿಸಿದ ನಾಲ್ಕು ವೇದಗಳು, ಜ್ಯೋತಿಷ್ಯವನ್ನು ಒಳಗೊಂಡ ವೇದದ ಆರು ಅಂಗಗಳು, ಆಯುರ್ವೇದವೇ ಮೊದಲಾದ ನಾಲ್ಕು ಉಪವೇದಗಳು, ರಾಮಾಯಣ ಮಹಾಭಾರತ ಒಳಗೊಂಡಂತೆ ಇತಿಹಾಸ- ಪುರಾಣಗಳು, ಆರು ದರ್ಶನಗಳು, ಸಕಲ ಕಲೆಗಳು, ಸಮಯುಗದ ಜಗತ್ತಿನ ಸಾಮಾನ್ಯ ಜ್ಞಾನ, ಆಧುನಿಕ ತಂತ್ರಜ್ಞಾನ, ದೇಶದ ಚರಿತ್ರೆ, ಸಂವಹನ ಕೌಶಲ, ಕಾನೂನು, ಧರ್ಮಯೋಧನಿಗೆ ಎದುರಾಗಬಹುದಾದ ವಿಪತ್ತುಗಳನ್ನು ಮನಸ್ಸಿನಲ್ಲಿರಿಸಿಕೊಂಡು ಆತ್ಮರಕ್ಷಣೆಯ ಸಮರ ವಿದ್ಯೆಗಳು ವಿದ್ಯಾವಿನ್ಯಾಸದಲ್ಲಿ ಸೇರಿವೆ. ವಿಶ್ವವಿದ್ಯಾಪೀಠದಲ್ಲಿ ವಿಕಾಸಗೊಂಡ ವಿದ್ಯಾರ್ಥಿ ಬಾಹ್ಯಜಗತ್ತಿನಲ್ಲಿ ಅಪ್ರಸ್ತುತನಾಗಬಾರದು ಎಂಬ ಕಾರಣಕ್ಕೆ ಇಂಗ್ಲಿಷ್, ಹಿಂದಿ ಮೊದಲಾದ ಆಧುನಿಕ ಸಮಾಜ ಭಾಷೆಗಳ ಅಧ್ಯಯನಕ್ಕೂ ಅವಕಾಶ ಇರುತ್ತದೆ. ಸಮಾಜದ ಎಲ್ಲ ವರ್ಗದವರಿಗೂ ಇಲ್ಲಿ ಅವಕಾಶವಿದ್ದು, ಅವರವರಿಗೆ ಸಲ್ಲುವ ವಿದ್ಯೆಗಳನ್ನು ಅವರು ಪಡೆದುಕೊಳ್ಳಬಹುದಾಗಿದೆ. ಒಂದು ವಿಷಯದಲ್ಲಿ ವಿದ್ಯಾರ್ಥಿ ಪರಿಪೂರ್ಣ ಪರಿಣತಿ ಪಡೆಯುವಂತೆ ರೂಪಿಸುವ ಜತೆಜತೆಗೆ ಬಾಕಿ ವಿದ್ಯೆಗಳ ಪರಿಚಯ ಇಲ್ಲಿನ ವಿದ್ಯಾವಿನ್ಯಾಸ.

ಅಂದು ಸಕಲ ಭಾರತೀಯ ವಿದ್ಯೆಗಳ ತವರುಮನೆ ಎನಿಸಿದ್ದ, ವಿಶ್ವದ ಉದ್ದಗಲಗಳಿಂದ ವಿದ್ಯೆಯನ್ನರಸಿ ಬರುವ ಹತ್ತಾರು, ಸಹಸ್ರಾರು ಜ್ಞಾನಾರ್ಥಿಗಳ ಬುದ್ಧಿಯನ್ನು ಬೆಳಕಾಗಿಸುತ್ತಿದ್ದ ತಕ್ಷಶಿಲೆಯನ್ನು ಸತತ ಪ್ರಯತ್ನಗಳಿಂದ ನಾಶಪಡಿಸಲಾಯಿತು. ಆದರೆ ಇಂದು ಅದಕ್ಕೆ ತದ್ವಿರುದ್ಧವಾಗಿ ಆದಿಗುರು ಶಂಕರರಿಂದ ಸ್ಫೂರ್ತಿ ಪಡೆದು, ಧರ್ಮನಿಷ್ಠರ- ದೇಶಪ್ರೇಮಿಗಳ ತ್ಯಾಗ-ಸೇವೆಯನ್ನು ಮೂಲಾಧಾರವಾಗಿರಿಸಿಕೊಂಡು, ಅದೇ ತಕ್ಷಶಿಲೆ ವಿಶ್ವವಿದ್ಯಾನಿಲಯದ ಪುನರ್ ಸೃಷ್ಟಿಯ ಪ್ರಯತ್ನ ಇದಾಗಿದೆ.

ಅತ್ಯಾಧುನಿಕ ಸಂಪರ್ಕ ವ್ಯವಸ್ಥೆ ಮೂಲಕ ದೇಶದ ಮೂಲೆಮೂಲೆಗಳ ತಜ್ಞ ವಿದ್ವಾಂಸರಿಂದ ಅಧ್ಯಾಪನ ವ್ಯವಸ್ಥೆಯೊಂದಿಗೆ ಆಧುನಿಕ ತಂತ್ರಜ್ಞಾನದ ಸೌಲಭ್ಯವನ್ನೂ ಸಮರ್ಥವಾಗಿ ಬಳಸಿಕೊಳ್ಳಲಾಗುತ್ತದೆ.

ಸರ್ಕಾರದ ಅನುದಾನಕ್ಕೆ ಕೈಚಾಚದೇ, ಸಂಪನ್ಮೂಲ ಹಾಗೂ ಮಾನ್ಯತೆ ಎರಡೂ ವಿಶ್ವವಿದ್ಯಾಪೀಠದ್ದೇ ಆಗಿರುತ್ತದೆ. ಸರ್ಕಾರದ ಮಾನ್ಯತೆಯ ಅವಶ್ಯಕತೆ ಇರುವಲ್ಲಿ ಪರೀಕ್ಷೆಗಳನ್ನು ಅಧಿಕೃತ ವ್ಯವಸ್ಥೆಯಿಂದ ಪಡೆದುಕೊಳ್ಳಲು ಪರ್ಯಾಯ ಕ್ರಮ ಅನುಸರಿಸಲಾಗುತ್ತದೆ.

ವೇದ- ಶಾಸ್ತ್ರಗಳು, ಪರಂಪರೆ- ಪದ್ಧತಿಗಳನ್ನು ಒಳಗೊಂಡ ಸಮಗ್ರ ಭಾರತೀಯ ಸಂಸ್ಕøತಿಯಲ್ಲಿ ಹುದುಗಿರುವ ಅದೆಷ್ಟೋ ಮಹತ್ವದ ಸಂಗತಿಗಳ ಕುರಿತು ಸಂಶೋಧನಾಲಯವೊಂದು ಇಲ್ಲಿ ಅನಾವರಣಗೊಳ್ಳಲಿದ್ದು, ಅದು ವಿಶ್ವವಿದ್ಯಾಪೀಠದ ಮುಕುಟಮಣಿಯಾಗಲಿದೆ.

ಶ್ರೀಶಂಕರ ಥೀಂಪಾರ್ಕ್
ಭಗವತ್ಪಾದರ ಪಾದಸ್ಪರ್ಶದ ಧನ್ಯತೆಯನ್ನು ಕಂಡ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಪರಿಸರದಲ್ಲಿ ಅವರ ಜೀವನ ಸಾಧನೆಗಳನ್ನು ಜೀವಲೋಕಕ್ಕೆ ಮನೋಜ್ಞವಾಗಿ ಬಿಂಬಿಸುವ ಥೀಮ್ ಪಾರ್ಕ್ ನೂತನ ವಿಶ್ವವಿದ್ಯಾಪೀಠದ ಆವರಣದಲ್ಲಿ ತಲೆ ಎತ್ತಲಿದೆ. ದಿವ್ಯೌಷಧವನದ ನಡುವೆ ಶಂಕರರ ಪಾವನ ಜೀವನದ ಶಿಲ್ಪ ಕಲ್ಪ, ಭವ್ಯಭವನದಲ್ಲಿ ಶ್ರೀಶಂಕರರ ಹೆಸರಿನಲ್ಲಿ ಭಾರತೀಯ ಸಂಸ್ಕøತಿ ಸಂಶೋಧನಾಲಯ, ಆಡಿಯೊ ವಿಡಿಯೊ ಪ್ರದರ್ಶಿನಿ, ವಸ್ತುಸಂಗ್ರಹಾಲಯ, ಬೃಹತ್ ಶಾಂಕರ ಗ್ರಂಥ ಸಂಗ್ರಹಾಗಾರ ಇರುತ್ತದೆ.

ಶ್ರೀಮಠದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಜಿ.ಭಟ್, ಧಾರಾ ರಾಮಾಯಣ ಕ್ರಿಯಾ ಸಮಿತಿ ಅಧ್ಯಕ್ಷೆ ಡಾ.ಶಾರದಾ ಜಯಗೋವಿಂದ್, ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿ ಭೀಮೇಶ್ವರ ಜೋಶಿ ಉಪಸ್ಥಿತರಿದ್ದರು. ಉದ್ದೇಶಿತ ವಿಶ್ವವಿದ್ಯಾಪೀಠಕ್ಕೆ ಹೊರನಾಡು ಕ್ಷೇತ್ರದ ವತಿಯಿಂದ 5 ಲಕ್ಷ ರೂಪಾಯಿ ದೇಣಿಗೆಯನ್ನು ಜೋಶಿಯವರು ಸಮರ್ಪಿಸಿದರು.

Tags: Kannada NewsTakshashila UniversityUniversityತಕ್ಷಶಿಲೆ ವಿಶ್ವವಿದ್ಯಾಲಯರಾಘವೇಶ್ವರ ಭಾರತೀ ಶ್ರೀವಿಶ್ವವಿದ್ಯಾನಿಲಯವಿಷ್ಣುಗುಪ್ತ ವಿಶ್ವವಿದ್ಯಾಪೀಠಶಂಕರಾಚಾರ್ಯರುಶ್ರೀಶಂಕರ ಥೀಂಪಾರ್ಕ್
Previous Post

ಕೇವಲ ಓರ್ವ ಕ್ರಿಕೆಟ್ ಆಟಗಾರನಿಗೆ ವೀರ ಯೋಧರಂತೆ ಬಿಲ್ಡಪ್ ಕೊಡುವ ಅಗತ್ಯವಿಲ್ಲ

Next Post

ಸಂಪಾದಕೀಯ-ಒಂದು ದೇಶ, ಒಂದು ಚುನಾವಣೆ: ಸಮಗ್ರ ಚರ್ಚೆಯ ಅಗತ್ಯವಿದೆ

kalpa

kalpa

Next Post

ಸಂಪಾದಕೀಯ-ಒಂದು ದೇಶ, ಒಂದು ಚುನಾವಣೆ: ಸಮಗ್ರ ಚರ್ಚೆಯ ಅಗತ್ಯವಿದೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ

September 28, 2023

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

September 28, 2023

ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

September 28, 2023

ನಿಖರ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಆತ್ಮವಿಶ್ವಾಸ ತುಂಬಿ: ಅಧಿಕಾರಿಗಳಿಗೆ ಕೃಷಿ ಸಚಿವರ ಸೂಚನೆ

September 28, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ

September 28, 2023

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

September 28, 2023

ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

September 28, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!