ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೇಶದಲ್ಲಿ ಎಲ್ಲಿ ಸ್ಪರ್ಧಿಸಿದರೂ ಗೆಲ್ಲುವುದಿಲ್ಲ ಎನ್ನುವುದು ಅವರಿಗೇ ಗೊತ್ತಾಗಿದೆ. ಹೀಗಾಗಿ, ರಾಜ್ಯದ ಬೀದರ್‌ನಿಂದ ಸ್ಪರ್ಧಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.
ಈ ಕುರಿತಂತೆ ಇಂದು ಮಾತನಾಡಿರುವ ಅವರು, ತಾವು ಎಲ್ಲಿ ಸ್ಪರ್ಧಿಸಿದರೂ ಗೆಲ್ಲುವುದಿಲ್ಲ ಎನ್ನುವುದು ಅವರಿಗೆ ತಿಳಿದಿದೆ. ಹೀಗಾಗಿ, ಕರ್ನಾಟಕ ಸೇಫ್ ಎಂಬ ನಿರ್ಧಾರಕ್ಕೆ ಅವರು ಬಂದಂತಿದ್ದು, ಬೀದರ್ ಕುರಿತು ಚಿಂತಿಸುತ್ತಿದ್ದಾರೆ. ಆದರೆ, ರಾಜ್ಯದ ಜನತೆ ಬುದ್ದಿವಂತರಿದ್ದಾರೆ. ಅವರನ್ನು ತಿರಸ್ಕರಿಸಲಿದ್ದಾರೆ ಎಂದು ಕಟಕಿಯಾಡಿದ್ದಾರೆ.

















