ಕಲ್ಪ ಮೀಡಿಯಾ ಹೌಸ್ | ರಾಯಚೂರು |
ಮಂತ್ರಾಲಯದ Mantralaya ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಅಂಗವಾಗಿ ನಿಕಟ ಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, B S Yadiyurappa ಸಂಸದ ಬಿ. ವೈ. ರಾಘವೇಂದ್ರ MP B Y Raghavendra ಹಾಗೂ ಬಿ. ವೈ ವಿಜಯೇಂದ್ರ B Y Vijayendra ಕುಟುಂಬ ಸಮೇತವಾಗಿ ಶ್ರೀ ರಾಯರ ದರ್ಶನವನ್ನು ಪಡೆದು, ಭಕ್ತಿ ಪೂರ್ವಕವಾಗಿ ಪೂಜೆಯನ್ನು ಸಲ್ಲಿಸಿ, ಶ್ರೀ ಮಠದ ಪೀಠಾಧಿಪತಿ ಡಾ. ಸುಬುಧೇಂದ್ರ ತೀರ್ಥರ ಆಶೀರ್ವಾದವನ್ನು ಪಡೆದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಸುದ್ಧಿಗಾರರೊಂದಿಗೆ ಮಾತನಾಡಿ, ಅತಿವೃಷ್ಟಿಯಿಂದಾಗಿ ಸಾಕಷ್ಟು ಬೆಳೆ ನಾಶವಾಗಿದ್ದು, ರೈತರ ಸ್ವಾಭಿಮಾನದ ಬದುಕಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಗುರುರಾಯರ ಅನುಗ್ರಹದಿಂದ ಎಲ್ಲಾ ಒಳಿತಾಗಲಿ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ನಮ್ಮ ಕುಟುಂಬ ಇನ್ನೂ ಹೆಚ್ಚಿನ ಪ್ರಾಮಾಣಿಕೆ ಸೇವೆ ಸಲ್ಲಿಸುವಂತಾಗಲಿ ಎಂದು ಇಂದು ಮಂತ್ರಾಲಯಕ್ಕೆ ಆಗಮಿಸಿ ರಾಯರ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿರುವುದಾಗಿ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post