ಕಲ್ಪ ಮೀಡಿಯಾ ಹೌಸ್ | ರಾಯಚೂರು |
ಇತ್ತೀಚಿನ ದಿನಗಳಲ್ಲಿ ಆಧುನಿಕ ಆಹಾರ ಪದ್ದತಿಯಿಂದ ಮದುಮೇಹ ಕಾಯಿಲೆ ಚಿಕ್ಕ ಮಕ್ಕಳಲ್ಲಿ ಕಂಡುಬರುತ್ತಿದ್ದು, ಮಧುಮೇಹ ಕಾಯಿಲೆ ಬಾರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪ್ರತಿಯೊಬ್ಬರು ಜಾಗೃತರಾಗಬೇಕು ಎಂದು ಅಪರ ಜಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ ಹೇಳಿದರು.
ಅವರು ನ.14ರ(ಸೋಮವಾರ) ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎನ್‌ಸಿಡಿ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಕ್ಯಾನ್ಸರ್, ಮಧುಮೇಹ, ಹೃದಯ ರಕ್ತನಾಳದ ಕಾಯಿಲೆಗಳು ಮತ್ತು ಪಾರ್ಶ್ವವಾಯು ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ರಾಷ್ಟ್ರೀಯ ಕಾರ್ಯಕ್ರಮದಡಿಯಲ್ಲಿ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಶಿಕ್ಷಣದಿಂದ ಭವಿಷ್ಯದ ರಕ್ಷಣೆ ಎಂಬ ಘೋಷವಾಕ್ಯದಡಿ ಇಂದು ಮಧುಮೇಹ ಕಾಯಿಲೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಮಧುಮೇಹ ಕಾಯಿಲೆಗಳ ಸಂಕೀರ್ಣ ಹೆಚ್ಚಾಗುತ್ತಿದೆ. ಮಿತವಾದ ಹಾಗೂ ಉತ್ತಮ ಆಹಾರ ಸೇವನೆ, ನಿಯಮಿತವಾಗಿ ವ್ಯಾಯಾಮ, ಯೋಗ ಮಾಡುವುದರಿಂದ ಮಧುಮೇಹ ಕಾಯಿಲೆಯನ್ನು ನಿಯಂತ್ರಿಸಬಹುದಾಗಿದೆ ಎಂದರು.
Also read: ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ: ತಪ್ಪಿದ ಭಾರೀ ಅನಾಹುತ
ಮಧುಮೇಹ ಕಾಯಿಲೆಯಿರುವ ರೋಗಿಗಳು ತಂಬಾಕು ಸೇವನೆ ಮಾಡಬಾರದು. ಖಾಲಿ ಹೊಟ್ಟೆಯಲ್ಲಿ ಯೋಗಾಸನಗಳನ್ನು ಮಾಡುವುದಾಗಲಿ, ಅಪೌಷ್ಟಿಕ ಆಹಾರ ಸೇವನೆ ಮಾಡಬಾರದು. ಜೊತೆಗೆ ಆಲಸಿ ಜೀವನದಿಂದ ದೂರವಿರಬೇಕು. ಮಧುಮೇಹ ಕಾಯಿಲೆಯ ಬರುವುದಕ್ಕೂ ಮೊದಲು ಅದರ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಾಯಿಲೆಯಿಂದ ದೂರವಿರಬೇಕು. ಇತ್ತೀಚಿನ ಆಧುನಿಕ ದಿನಮಾನಗಳಲ್ಲಿ ಹೊರಗಡೆಯ ತಿಂಡಿಗಳಿಂದ ಮಕ್ಕಳಲ್ಲಿಯೂ ಮಧುಮೇಹ ಕಾಯಿಲೆಯ ಲಕ್ಷಗಳು ಕಂಡುಬರುತ್ತಿದ್ದು, ಆರೋಗ್ಯಕರ ಆಹಾರ ಸೇವೆನೆ ಮಾಡಬೇಕಾಗಿರುವುದು ಅವಶ್ಯವಾಗಿದೆ ಎಂದರು.
ಜಿಲ್ಲಾ ನ್ಯೂಮೋನಿಯಾ ಕಾಯಿಲೆಯ ನಿಯಂತ್ರಣಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಸಾನ್ಸ್ ಕಾರ್ಯಕ್ರಮ ಸೇರಿದಂತೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮಕ್ಕಳಲ್ಲಿ ಉಸಿರಾಟದ ತೊಂದರೆ, ಉಸಿರಾಡುವ ಸಮಯದಲ್ಲಿ ಪಕ್ಕೆಯಲ್ಲಿ ಸೆಳೆತ ಕಂಡುಬoದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವoತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜಶೇಖರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಶಸ್ತಸ್ತ್ರಚಿಕಿತ್ಸಕರಾದ ಡಾ.ವಿಜಯಶಂಕರ, ಹೃದ್ರೋಗ ತಜ್ಞರಾದ ಡಾ.ಸುರೇಶ ಸಗರದ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ನಂದಿತಾ, ಜಿಲ್ಲಾ ರ‍್ವೇಕ್ಷಣಾ ಅಧಿಕಾರಿ ಡಾ.ಗಣೇಶ.ಕೆ ಸೇರಿದಂತೆ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಎಸ್.ಕೆ.ಇ.ಎಸ್ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post