ಕಲ್ಪ ಮೀಡಿಯಾ ಹೌಸ್ | ರಾಯಚೂರು |
ರಾಷ್ಟ್ರಪತಿಗಳ ಆದೇಶದ ಮೇರೆಗೆ ಕೇಂದ್ರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದಿಂದ ಜಿ. ಆರ್. ಕನಕವೀಡು ಇವರನ್ನು ಹೆಚ್‌ಪಿಐಎಲ್‌ನ ಸ್ವತಂತ್ರ ನಿರ್ದೇಶಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
ಜಿ.ಆರ್. ಕನಕವೀಡು ಅವರು ಅತ್ಯುನ್ನತ ಶಿಕ್ಷಣವಾದ B.Tech (Textiles)( BIETT Davangere loborio M.B.A(Maharashtra) evais ವ್ಯಾಸಂಗ ಹಾಗೂ 30 ವರ್ಷಗಳ ಸಮಾಜ ಸೇವೆಯನ್ನು ನಿಸ್ವಾರ್ಥವಾಗಿ, ಪ್ರಾಮಾಣಿಕತೆಯಿಂದ ಸಲ್ಲಿಸಿದ್ದನ್ನು ಪರಿಗಣಿಸಿ, ವಿದ್ಯಾರ್ಥಿದೆಸೆಯಿಂದ ಯುವಕರ ಮುಂದಾಳುತ್ವವನ್ನು ವಹಿಸಿ ಮುಖ್ಯವಾದ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.
ಬಡವರ ರೈತರ ಪರವಾದ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟಗಳಲ್ಲಿ ಪಾಲ್ಗೊಂಡಿದ್ದಾರೆ. ಈ ಎಲ್ಲಾ ಅಂಶಗಳನ್ನು ಗಮನಿಸಿ ಭಾರತ ಸರ್ಕಾರವು ಹೆಚ್‌ಪಿಐಎಲ್‌ನ ಸ್ವತಂತ್ರ ನಿರ್ದೇಶಕರನ್ನಾಗಿ ನೇಮಕಗೊಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post