No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಯಚೂರು

ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲು ಮೂಲಶಕ್ತಿ ವೇದವ್ಯಾಸರು | ವಿದ್ಯೇಶತೀರ್ಥ ಶ್ರೀಗಳ ಅಭಿಮತ

ರಾಯಚೂರು | ಮಾಧ್ವರಾದ್ಯಂತ ಸಂವರ್ಧಕ ಸಭೆ, ವಿದ್ಯಾಮಾನ್ಯ ತೀರ್ಥರ ಆರಾಧನೆ

kalpa News by kalpa News
April 28, 2026
in ರಾಯಚೂರು
1
ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲು ಮೂಲಶಕ್ತಿ ವೇದವ್ಯಾಸರು | ವಿದ್ಯೇಶತೀರ್ಥ ಶ್ರೀಗಳ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ರಾಯಚೂರು  |

ಭಾರತವು ವಿಶ್ವಗುರು ಸ್ಥಾನವನ್ನು ಅಲಂಕರಿಸಲು ಕಾರಣವಾದ ಮೂಲಶಕ್ತಿ ಭಗವಾನ್ ಶ್ರೀವೇದವ್ಯಾಸರು ಎಂದು ಉಡುಪಿ ಭಂಡರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.

ನಗರದ ಸತ್ಯನಾಥ ಕಾಲೋನಿಯಲ್ಲಿ #Udupi ಉಡುಪಿ ಶ್ರೀ ಭಂಡಾರಕೇರಿ ಮಠದ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ವೇದವ್ಯಾಸ ಜಯಂತಿ, ಮಾಧ್ವರಾದ್ಯಂತ ಸಂವರ್ಧಕ ಸಭಾ ಹಾಗೂ ಶ್ರೀವಿದ್ಯಾಮಾನ್ಯ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವದಲ್ಲಿ ಅವರು ಮಾತನಾಡಿದರು.

Also Read>> ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

ಭಾರತವು ವಿಶ್ವಗುರು ಸ್ಥಾನವನ್ನು ಅಲಂಕರಿಸಲು ಕಾರಣವಾದ ಮೂಲಶಕ್ತಿ ಭಗವಾನ್ ಶ್ರೀ ವೇದವ್ಯಾಸರೇ. #SriVedavyasaru ಅವರ ಸಾಹಿತ್ಯವೇ ಭಾರತೀಯ ಶಾಸ್ತ್ರಪರಂಪರೆಯ ಅಸ್ತಿತ್ವಕ್ಕೆ ಮೂಲಾಧಾರವಾಗಿದೆ ಎಂದು ಅವರು ಹೇಳಿದರು.

ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀವಿಶ್ವಪ್ರಸನ್ನ ತೀರ್ಥರು ಮಾತನಾಡಿ, ವೇದವ್ಯಾಸರು ರಚಿಸಿದ ಗ್ರಂಥಗಳ ಸಾರವು ಶ್ರೀಮನ್ನಾರಾಯಣನ ಚಿಂತನೆಯೇ ಆಗಿದ್ದು, ಆ ಪರಮಾತ್ಮನ ಗುಣಪೂರ್ಣತ್ವದ ಉಪಾಸನೆಯ ಮೂಲಕ ಮಾನವನಲ್ಲಿ ಸತ್ಪ್ರವೃತ್ತಿಗಳು ಬೆಳೆಯುತ್ತವೆ ಎಂದು ಹೇಳಿದರು.ಕಾರ್ಯಕ್ರಮವು ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ಹಾಗೂ ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥರ ದಿವ್ಯ ಸಾನ್ನಿಧ್ಯದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಮಾಧ್ವರಾದ್ಯಂತ ಸಂವರ್ಧಕ ಸಭೆಯ ವತಿಯಿಂದ, ಕಾಂಚಿ ಶಂಕರಾಚಾರ್ಯ ಮಠದಿಂದ #KanchiShankaracharyaMatha ಪೋಷಿತವಾದ ಶ್ರೀ ವೇದರಕ್ಷ ಣನಿಧಿ ಟ್ರಸ್ಟ್ ಸಂಸ್ಥೆಗೆ ಒಂದು ಲಕ್ಷ ರೂಗಳನ್ನೊಳಗೊಂಡ ಶ್ರೀ ವೇದಪೀಠ ಪ್ರಶಸ್ತಿ ಪ್ರದಾನಿಸಲಾಯಿತು.

Also Read>> ಬಿಜೆಪಿಗರು ಹೊಟ್ಟೆಕಿಚ್ಚಿಗೆ ಮಕ್ಕಳ ಭವಿಷ್ಯ ಹಾಳು ಮಾಡುತ್ತಿದ್ದಾರೆ: ಸಚಿವ ಮಧು ಬಂಗಾರಪ್ಪ ಲೇವಡಿ

ಟ್ರಸ್ಟ್ ಪರವಾಗಿ ವೇದವಿದ್ವಾಂಸರಾದ ಶ್ರೀ ಗಣಪತಿ ಭಟ್ಟ ಹಾಗೂ ಶ್ರೀ ಗಣೇಶ ಘಣಪಾಠಿಗಳು ಪ್ರಶಸ್ತಿಯನ್ನು ಸ್ವೀಕರಿಸಿದರು. ಕಳೆದ ಆರು ದಶಕಗಳಿಂದ ವೇದ ಅಧ್ಯಯನ ಮತ್ತು ಪರಂಪರೆಯ ಉಳಿವಿಗೆ ಈ ಸಂಸ್ಥೆ ನೀಡುತ್ತಿರುವ ಕೊಡುಗೆಯನ್ನು ಈ ವೇಳೆ ಪ್ರಶಂಸಿಸಲಾಯಿತು.

ಹಾಗೆಯೇ, ವೇದವ್ಯಾಸ ವಿದ್ಯಾಪೀಠವನ್ನು #VedavyasaVidyapeetha ನಡೆಸುತ್ತಾ, ವಿದ್ಯಾರ್ಥಿಗಳಿಗೆ ಶಾಸ್ತ್ರೋಪದೇಶ ಹಾಗೂ ಭಕ್ತರಿಗೆ ಮಹಾಭಾರತ, ರಾಮಾಯಣ ಮೊದಲಾದ ವಿಷಯಗಳಲ್ಲಿ ಪ್ರವಚನ ನೀಡುವ ಮೂಲಕ ಭಾರತೀಯ ಸಂಸ್ಕೃತಿಯನ್ನು ಪೋಷಿಸುತ್ತಾ ಬಂದಿರುವ ಹೈದರಾಬಾದ್’ನ ಹಿರಿಯ ವೇದಾಂತ ಪಂಡಿತರಾದ, ಶ್ರೀ ಚಿಟಗುಪ್ಪ ಪದ್ಮನಾಭಾಚಾರ್ಯರಿಗೆ ಒಂದು ಲಕ್ಷ ರೂ.ಗಳನ್ನೊಳಗೊಂಡ ಶ್ರೀ ಸತ್ಯತೀರ್ಥಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇದೇ ವೇಳೆ ಬಾಗಲಕೋಟೆಯಲ್ಲಿ ಕಳೆದ ಮೂರು ದಶಕಗಳಿಂದ ಪಾಠ-ಪ್ರವಚನಗಳಲ್ಲಿ ತೊಡಗಿಸಿಕೊಂಡಿರುವ ಹಿರಿಯ ಪಂಡಿತರಾದ ರಘೂತ್ತಮಚಾರ್ಯ ನಾಗಸಂಪಿಗೆಯವರಿಗೆ, ಐವತ್ತು ಸಹಸ್ರ ರೂಗಳನ್ನೊಳಗೊಂಡ ಭಂಡಾರಕೇರಿ ರಾಜಹಂಸ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಅಲ್ಲದೇ, ಮೈಸೂರಿನ ಪ್ರಸಿದ್ಧ ಪ್ರವಚನಕರಾರೂ, ಸಂಶೋಧಕರೂ ಆದ ಶ್ರೀ ಬೆಮ್ಮತ್ತಿ ವಿಜಯೀಂದ್ರಾಚಾರ್ಯರಿಗೆ ಐವತ್ತು ಸಹಸ್ರ ರೂಗಳನ್ನೊಳಗೊಂಡ ಶ್ರೀ ರಾಜವಿದ್ಯಾಮಾನ್ಯ ಪ್ರಶಸ್ತಿ ಪ್ರದಾನಿಸಲಾಯಿತು. ಕನ್ಯೆಯರಿಗಾಗಿ ಗುರುಕುಲವನ್ನು ನಡೆಸುತ್ತಿರುವ ಅವರ ಕಾರ್ಯವನ್ನು ವಿಶೇಷವಾಗಿ ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಶ್ರೀ ನಾಗಸಂಪಿಗೆ ಆನಂದತೀರ್ಥಾಚಾರ್ಯರು ವೇದವ್ಯಾಸರ ಕುರಿತ ವಿಶೇಷ ಉಪನ್ಯಾಸವನ್ನು ನೀಡಿದರು.

ಇದೇ ಸಂದರ್ಭದಲ್ಲಿ ಇಬ್ಬರು ಶ್ರೀಪಾದರ ನೇತೃತ್ವದಲ್ಲಿ ಸೇರಿದ ನೂರಾರು ಭಕ್ತರು ವೇದವ್ಯಾಸರ ಹಾಗೂ ವಿದ್ಯಾಮಾನ್ಯರ ಭಾವಚಿತ್ರದ ಮೆರವಣಿಗೆ ಶೋಭಾಯಾತ್ರೆಯಲ್ಲಿ ಭಾಗವಹಿಸಿ ಧನ್ಯತೆಯನ್ನು ಅನುಭವಿಸಿದರು. ಶ್ರೀ ವೇದವ್ಯಾಸರ ತುಲಾಭಾರವನ್ನು ನಡೆಸಿ, ಭಾಗವಹಿಸಿದ ಭಕ್ತರೆಲ್ಲರಿಗೂ ಶ್ರೀಪಾದರು ಪ್ರಸಾದವನ್ನು ಅನುಗ್ರಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bandarakeri Vidyeshatheertha ShriBayalu Seeme NewsBhagawan VedavyasaKannada News WebsiteLatest News KannadaPejawara ShreeRaichurUdupiಉಡುಪಿಪೇಜಾವರ ಅಧೋಕ್ಷಜ ಮಠಭಂಡರಕೇರಿ ಮಠಭಾರತಭಾರತೀಯ ಶಾಸ್ತ್ರಪರಂಪರೆರಾಯಚೂರುವಿಶ್ವಗುರುಶ್ರೀ ವಿದ್ಯೇಶತೀರ್ಥ ಶ್ರೀಪಾದರುಶ್ರೀವಿಶ್ವಪ್ರಸನ್ನ ತೀರ್ಥರುಶ್ರೀವೇದವ್ಯಾಸರು
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

Next Post

ಕಾರ್ಕಳ | ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ | 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

kalpa News

kalpa News

Next Post
ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ

ಕಾರ್ಕಳ | ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ | 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

Comments 1

  1. Pingback: ಕಾರ್ಕಳ | ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ | 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ » kal

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL