ಕಲ್ಪ ಮೀಡಿಯಾ ಹೌಸ್ | ರಾಯಚೂರು |
ಭೀಕರ ರಸ್ತೆ ಅಪಘಾತದಲ್ಲಿ #Accident ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಂಧನೂರು ತಾಲೂಕಿನ ಬೂದಿವಾಳ ಕ್ಯಾಂಪ್ ಬಳಿ ನಡೆದಿದೆ.
ಸಣ್ಣ ಯಲ್ಲಪ್ಪ (45), ಹರಿ (25), ರಂಗನಾಥ (12), ಬಸವರಾಜ್ (40), ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಆಂಧ್ರಪ್ರದೇಶ ಮೂಲದ ಟಂ ಟಂ ವಾಹನ ಹಾಗೂ ಬುಲೆರೋ ಪಿಕಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಯಿಂದಾಗಿ ವಾಹನಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆ ಮೂಲಗಳ ಪ್ರಕಾರ, ಕೆಲವು ಗಾಯಾಳುಗಳ ಸ್ಥಿತಿ ಇನ್ನೂ ಗಂಭೀರವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















