ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಹತ್ವದ ಬೆಳವಣಿಗೆಯೊಂದರಲ್ಲಿ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್ ಪಟ್ಟಿಯನ್ನು ಬಿಡುಗಡೆ ಮಾಡಲು ಇಲಾಖೆ ನಿರ್ಧರಿಸಿದೆ.
ಈ ಕುರಿತಂತೆ ಮಹತ್ವದ ವರದಿಯಾಗಿದ್ದು, ಪ್ರಸ್ತುತ ರೈಲು ಹೊರಡುವ 4 ಗಂಟೆಯ ಮೊದಲು ರಿಸರ್ವೇಷನ್ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿತ್ತು.
ಆದರೆ, ಜುಲೈ 1ರಿಂದ ಅನ್ವಯವಾಗುವಂತೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.
ಜುಲೈ 1 ರಿಂದ 2025 ರಿಂದ ಐಆರ್’ಸಿಟಿಸಿ ವೆಬ್ ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಪರಿಶೀಲಿಸಿದ ಬಳಕೆದಾರರಿಗೆ ಮಾತ್ರ ತತ್ಕಾಲ್ ಟಿಕೆಟ್’ಗಳನ್ನು ಬುಕ್ ಮಾಡಲು ಅನುಮತಿ ನೀಡಲಾಗುವುದು ಎಂದು ಇಲಾಖೆ ಹೇಳಿದೆ.
ಈ ಬದಲಾವಣೆಯಿಂದ ಪ್ರಯಾಣಿಕರಿಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದ್ದು, ಒಂದು ವೇಳೆ ವೇಟಿಂಗ್ ಲಿಸ್ಟ್’ನಲ್ಲಿದ್ದ ಪ್ರಯಾಣಿಕರಿಗೆ ಟಿಕೆಟ್ ಸಿಗದೇ ಇದ್ದರೆ ಪರ್ಯಾಯ ಪ್ರಯಾಣ ವ್ಯವಸ್ಥೆಗಳನ್ನು ಮಾಡಲು ಸಮಯ ಸಿಗಲಿದೆ.ತತ್ಕಾಲ್ ಬುಕ್ಕಿಂಗ್’ಗಳಿಗಾಗಿ ಒಟಿಪಿ ಆಧಾರಿತ ದೃಢೀಕರಣದ ಅನುಷ್ಠಾನವು ಜುಲೈ ಕೊನೆಯಿಂದ ಆರಂಭವಾಗಲಿದೆ. ಬಳಕೆದಾರರು ಆಧಾರ್ ಅಥವಾ ತಮ್ಮ ಡಿಜಿಲಾಕರ್ ಖಾತೆಗಳಲ್ಲಿ ಸಂಗ್ರಹವಾಗಿರುವ ಇತರ ಮಾನ್ಯ ಸರ್ಕಾರಿ ಗುರುತಿನ ದಾಖಲೆಗಳನ್ನು ಬಳಸಿಕೊಂಡು ತಮ್ಮ ಗುರುತನ್ನು ಪರಿಶೀಲಿಸಬೇಕಾಗುತ್ತದೆ.
ಈ ಹಿಂದೆ ಆಧಾರ್-ಪ್ರಮಾಣೀಕೃತ ಬಳಕೆದಾರರು ಮಾತ್ರ ಜುಲೈ 1 ರಿಂದ ತತ್ಕಾಲ್ ಟಿಕೆಟ್’ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಿಸಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post