ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ದಕ್ಷಿಣ ಕನ್ನಡ |
ಆಗಸ್ಟ್ 10ರವರೆಗೂ ರಾಜ್ಯ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಮುನ್ಸೂಚನೆ ಪ್ರಕಟಿಸಿರುವ ಹವಾಮಾನ ಇಲಾಖೆ, ಆಗಸ್ಟ್ 10ರವರೆಗೂ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಉಳಿದಂತೆ ಬೀದರ್, ಬಿಜಾಪುರ, ಗುಲ್ಬರ್ಗಾ, ಯಾದಗಿರಿ, ರಾಯಚೂರು, ಕೊಪ್ಪಳ, ದಾವಣಗೆರೆ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಆಗಸ್ಟ್ 7ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post