ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಮಕ್ಕಳಲ್ಲಿ ಪರಿಸರದ ಬಗೆಗೆ ಅರಿವು ಮೂಡಿಸಬೇಕು ಎಂದು ಶಾಸಕ ಟಿ. ರಘುಮೂರ್ತಿ ಪೋಷಕರಿಗೆ ಸಲಹೆ ನೀಡಿದರು.
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಸಸಿ ನೆಡುವ ಕಾರ‌್ಯಕ್ರಮದಲ್ಲಿ ಅವರು ಮಾತನಾಡಿದರು.
ಹೆಚ್ಚು ಗಿಡ-ಮರಗಳನ್ನು ಬೆಳೆಸುವುದರಿಂದ ಶುದ್ದಗಾಳಿ ದೊರೆಯುತ್ತದೆ. ಆದ ಕಾರಣ ಪ್ರತಿಯೊಬ್ಬರು ತಮ್ಮ ಮನೆಗಳ ಮುಂದೆ ಹಸಿರು ಸಸಿಗಳನ್ನು ಬೆಳೆಸಬೇಕು ಎಂದು ಹೇಳಿದರು.
ಬಂಜರು ಭೂಮಿಯಲ್ಲಿ ಹೊಂಗೆ, ಹುಣಸೆ, ಬೇವು ಮುಂತಾದ ಗಿಡಗಳನ್ನು ಬೆಳೆಸಲು ರೈತರನ್ನು ಪ್ರೇರೇಪಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ರೈತ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರವಿಕುಮಾರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಮಾತನಾಡಿದರು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೀರೇಶ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ಸುರೇಶ್, ರೇಂಜರ್ ಇಮಾಂ, ಕಾಂಗ್ರೆಸ್ ಮುಖಂಡರಾದ ಜಿ. ಮಾರಣ್ಣ, ಬೋರಯ್ಯ, ಪಾಪಣ್ಣ ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Get In Touch With Us info@kalpa.news Whatsapp: 9481252093





Discussion about this post