ಕಲ್ಪ ಮೀಡಿಯಾ ಹೌಸ್ | ರಾಜ್ ಗಢ |
ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ಸಾವನ್ನಪ್ಪಿ, 15 ಜನರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರಾಜ್ಗಢದಲ್ಲಿ ನಡೆದಿದೆ.
ರಾಜ್ಗಢ್ನ ಪಿಪ್ಲೋಡಿಯಲ್ಲಿ ಭಾನುವಾರ ರಾತ್ರಿ ಮದುವೆ ಮೆರವಣಿಗೆ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೆರವಣಿಗೆ ರಾಜಸ್ಥಾನದ ಮೋತಿಪುರದಿಂದ ಕುಲಂಪುರಕ್ಕೆ ತೆರಳುತ್ತಿತ್ತು ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಚಿವ ನಾರಾಯಣ್ ಸಿಂಗ್ ಪನ್ವಾರ್ ಸ್ಥಳಕ್ಕೆ ಭೇಟಿ ನೀಡಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Also read: ರಕ್ತದಾನ ಮಾಡುವುದು ಪ್ರತೀ ಆರೋಗ್ಯವಂತ ವ್ಯಕ್ತಿಯ ಕರ್ತವ್ಯ: ಡಾ. ಪ್ರಭು ಸಾಹುಕಾರ್
ರಾಜಸ್ಥಾನ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಅಲ್ಲಿನ ಪೊಲೀಸರು ಕೂಡ ಸ್ಥಳಕ್ಕೆ ತಲುಪಿದ್ದಾರೆ. ರಾಜ್ಗಢದ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ರೋಗಿಗಳನ್ನು ಭೋಪಾಲ್ಗೆ ಸ್ಥಳಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post