ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ಇಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ತಂಡ ಭೇಟಿ ನೀಡಲಿದ್ದು, ಎರಡು ದಿನ ಅಲ್ಲೇ ಮೊಕ್ಕಾಂ ಹೂಡಲಿದೆ.
ಅಮರನಾಥ ಯಾತ್ರೆ ಹಾಗೂ ರಂಜಾನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆಯ ಕುರಿತಾಗಿ ಮಹತ್ವದ ಸಭೆ ನಡೆಸಲಿದ್ದಾರೆ. ಅಲ್ಲಿನ ರಾಜ್ಯಪಾಲ ಎನ್.ಎನ್. ವೊಹ್ರಾ, ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸೇರಿದಂತೆ ರಾಜ್ಯ ಹಾಗೂ ಕೇಂದ್ರ ಗೃಹ ಇಲಾಖೆಯ ಉನ್ನತಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜ್ಯದಲ್ಲಿ ಉಗ್ರರ ದಾಳಿ, ಪ್ರತ್ಯೇಕತಾವಾದಿಗಳ ಅಶಾಂತಿಯುತ ಹೋರಾಟ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಅತ್ಯಂತ ಪ್ರಮುಖವಾಗಿ ಜೂನ್ 28ರಿಂದ ಆರಂಭವಾಗುವ ಪವಿತ್ರ ಅಮರನಾಥ ಯಾತ್ರೆ ಕುರಿತಾಗಿ ಮಾತುಕತೆ ನಡೆಸಲಿದ್ದು, ಯಾತ್ರಿಕರ ಭದ್ರತೆಗಾಗಿ ಕೈಗೊಂಡ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಚರ್ಚಿಸಲಿದ್ದಾರೆ.
Discussion about this post