ಕಲ್ಪ ಮೀಡಿಯಾ ಹೌಸ್ | ರಜೌರಿ |
ಜಮ್ಮು ಕಾಶ್ಮೀರದ ರಜೌರಿಯಲ್ಲಿ ಸೇನಾ ವಾಹನವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮೂವರು ಸೇನಾನಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಡಿ ರೇಖೆ ಬಳಿಯ ಕರ‍್ರಿ ಸೆಕ್ಟರ್’ನ ಡುಂಗಿ ಗಾಲಾ ಬಳಿ ಅಪಘಾತ ಸಂಭವಿಸಿದ್ದು, ಸೇನಾ ಸಿಬ್ಬಂದಿಗಳು ಪ್ರಯಾಣಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ಆಳವಾದ ಕಮರಿಗೆ ಉರುಳಿದೆ. ಇದರಿಂದಾಗಿ ಇಬ್ಬರು ಯೋಧರು ಸ್ಥಳದಲ್ಲೇ ಹುತಾತ್ಮರಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ಮಾಹಿತಿ ದೊರೆತಾಕ್ಷಣ ಸೇನೆ, ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸೇನಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
Also read: ಶಿವಮೊಗ್ಗ ನಗರದಲ್ಲಿ ಮೊದಲು ಮತದಾನ ಮಾಡಿದ 93 ವರ್ಷದ ಮತದಾರರು ಯಾರು ಗೊತ್ತಾ?


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















