ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ಹಿನ್ನೆಲೆಯಲ್ಲಿ ಇಂದು ನಗರದ ಹಲವು ದೇವಾಲಯಗಳಲ್ಲಿ ರಾಮತಾರಕ ಹೋಮ ಸೇರಿದಂತೆ ವಿಶೇಷ ಪೂಜೆ ನಡೆಸಲಾಯಿತು.
ಕೋಟೆ ಶ್ರೀಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ರಾಮತಾರಕ ಹವನವನ್ನು ವೈದಿಕರು ನಡೆಸಿದರು.
ವಿನೋಬನಗರ ಶನೈಶ್ಚರ ದೇವಸ್ಥಾನದ ಆವರಣದಲ್ಲಿ ಶ್ರೀ ಶನೈಶ್ಚರ ದೇವಸ್ಥಾನ ಸಮಿತಿ ಮತ್ತು ವೇದಮೂರ್ತಿ ರಾಮ್ ಭಟ್ ನೇತೃತ್ವದಲ್ಲಿ ಶ್ರೀರಾಮ ತಾರಕ ಹೋಮ ನಡೆಯಿತು.
ಕರ ಸೇವಕರಾಗಿ ಅಯೋಧ್ಯೆಗೆ ತೆರಳಿದ್ದ ಇಂದಿನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಎರಡೂ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಜೊತೆಯಲ್ಲಿ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಈ. ಕಾಂತೇಶ್ ಹಾಗೂ ಕುಟುಂಬಸ್ಥರೂ ಸಹ ಪಾಲ್ಗೊಂಡಿದ್ದರು.
Get In Touch With Us info@kalpa.news Whatsapp: 9481252093
Discussion about this post