ಕಲ್ಪ ಮೀಡಿಯಾ ಹೌಸ್ | ರಾಮನಗರ |
ದ್ವಿಚಕ್ರ ವಾಹನಕ್ಕೆ #Accident ಬಸ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚನ್ನಪಟ್ಟಣ #Channapattana ಸಮೀಪದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸಾವಿಗೀಡಾದವರನ್ನು ಸಿದ್ದಪ್ಪ(65) ಮತ್ತು ಅರುಣ್ (23) ಎಂದು ಗುರುತಿಸಲಾಗಿದೆ.
ಚನ್ನಪಟ್ಟಣಕ್ಕೆ ತೆರಳುತ್ತಿದ್ದ ಬಸ್ ಬೈಕ್’ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















