ಕಲ್ಪ ಮೀಡಿಯಾ ಹೌಸ್ | ರಾಮನಗರ |
ಕಾಂಗ್ರೆಸ್ ನವರ ನಿಯತ್ತು, ಉದ್ದೇಶ ಸರಿಯಾಗಿಲ್ಲ. ಅವರು ರೈತರಿಗೆ ಯಾವುದೇ ಗ್ಯಾರಂಟಿ ನೀಡಿಲ್ಲ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ #Bandeppa Khashempur ಆರೋಪಿಸಿದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಕುಮಾರಸ್ವಾಮಿ #Nikhil Kumaraswamy ಪರವಾಗಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚಿಕ್ಕೇನಹಳ್ಳಿಯಲ್ಲಿ ಗುರುವಾರ ಮತಯಾಚನೆ ನಡೆಸಿ ಅವರು ಮಾತನಾಡಿದರು.
ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸಿ.ಪಿ ಯೋಗೇಶ್ವರ್ ರವರು ದುಡ್ಡಿಗಾಗಿ ಕಾಂಗ್ರೆಸ್ ಗೆ ಹೋಗಿದ್ದಾರೆ. ಅವರಿಗೆ ಜೆಡಿಎಸ್, ಬಿಜೆಪಿ ಎರಡು ಪಕ್ಷಗಳಿಂದ ಟಿಕೆಟ್ ನೀಡಲು ನಾವು ಸಿದ್ದರಿದ್ದೇವು. ಆದರೇ ಅವರು ಎಲ್ಲವನ್ನೂ ಕಡೆಗಣಿಸಿ ಕಾಂಗ್ರೆಸ್ ಗೆ ಹೋಗಿದ್ದಾರೆ.
ನಾವು ಅಧಿಕಾರದಲ್ಲಿ ಇದ್ದಾಗ ರೈತರ ಸಾಲ ಮನ್ನಾ ಮಾಡಿದ್ದೇವು. ಕಾಂಗ್ರೆಸ್ ನವರು ರೈತರಿಗಾಗಿ ಯಾವುದೇ ಗ್ಯಾರಂಟಿ ನೀಡಿಲ್ಲ. ಕುಮಾರಸ್ವಾಮಿರವರ ಬಗ್ಗೆ ಮಾತನಾಡುವ ಯೋಗ್ಯತೆ ಯೋಗೇಶ್ವರರಿಗೆ ಇಲ್ಲ. ಕುಮಾರಸ್ವಾಮಿರವರು ಏನೆಲ್ಲಾ ಕೆಲಸ ಮಾಡಿದ್ದಾರೆ ಎಂಬ ಮಾಹಿತಿ ಬೇಕಿದ್ರೆ ನಾನು ಕೊಡ್ತಿನಿ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ನಿಖಿಲ್ ಕುಮಾರಸ್ವಾಮಿ ಗೆಲ್ಲಬೇಕು. ಅವರ ಗೆಲುವಿನ ಮೂಲಕ ಕುಮಾರಸ್ವಾಮಿರವರ ಕೈ ಬಲಪಡಿಸಬೇಕಾಗಿದೆ. ಚಿಕ್ಕೇನಹಳ್ಳಿಯ ಜನರು ಅವರ ಗೆಲುವಿಗಾಗಿ ಶ್ರಮಿಸಬೇಕು. ಜೆಡಿಎಸ್, ಬಿಜೆಪಿ ಮುಖಂಡರು, ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿರವರ ಗೆಲುವಿಗಾಗಿ ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ಸಿ.ಎಂ ನಾಗರಾಜು, ಚನ್ನಪಟ್ಟಣ ನಗರಸಭೆ ಸದಸ್ಯ ಮಂಜುನಾಥ ಜೆಡಿಎಸ್, ಬಿಜೆಪಿ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post