ಕಲ್ಪ ಮೀಡಿಯಾ ಹೌಸ್
ರಾಮನಗರ: ನಿರ್ಮಾಣ ಹಂತದ ಮ್ಯಾನ್ ಹೋಲ್ ಒಳಗೆ ಇಳಿದ ಮೂವರು ಕಾರ್ಮಿಕರು ಉಸಿರು ಗಟ್ಟಿ ಸಾವನ್ನಪ್ಪಿರುವ ಘಟನೆ ಐಜೂರು ಬಳಿ ನೇತಾಜಿ ಪಾಪೂಲರ್ ಶಾಲೆ ಮುಂಭಾಗ ನಡೆದಿರುವ ಘಟನೆ.
ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ರಾಮನಗರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದು. ಬಳಿಕ ಎಸ್‌ಪಿ ಕಚೇರಿಗೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದರು.
ಜೀವನ ನಿರ್ವಹಣೆಗಾಗಿ ಲಾಕ್ ಡೌನ್ ಲೆಕ್ಕಿಸದೆ ಕೆಲಸ ಮಾಡುತ್ತಿದ್ದ ಮೂವರು ಕೂಲಿ ಕಾರ್ಮಿಕರ ಸಾವಿನಿಂದ ಅವರ ಕುಟುಂಬ ವರ್ಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಸರ್ಕಾರದಿಂದ ಪರಿಹಾರಕ್ಕೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post