ಕಲ್ಪ ಮೀಡಿಯಾ ಹೌಸ್ | ರಾಮನಗರ |
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಸ್’ವೊಂದು ಡಿವೈಡರ್’ಗೆ ಡಿಕ್ಕಿಯಾಗಿ ಭೀಕರ ಅಪಘಾತ #Accident on Bengaluru-Mysore highway ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರು ಘಟನೆ ಇಂದು ನಡೆದಿದೆ.
ಕೇರಳ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಬಸ್ ಡಿವೈಡರ್’ಗೆ ಡಿಕ್ಕಿಯಾಗಿದೆ.
ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಮೃತರು ಕೇರಳ ಮೂಲದವರು ಎಂದು ವರದಿಯಾಗಿದೆ. ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಚನ್ನಪಟ್ಟಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















