ಕಲ್ಪ ಮೀಡಿಯಾ ಹೌಸ್ | ರಾಮನಗರ |
ಪತ್ನಿಯ ಶೀಲ ಶಂಕಿಸಿ ಮಕ್ಕಳೆದುರೇ ಆಕೆಯನ್ನು ದೊಣ್ಣೆಯಿಂದ ಹೊಡೆದ ಹತ್ಯೆ ಮಾಡಿರುವ ಘಟನೆ ಕನಕಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ಅಂಬಿಕಾ(30) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಮುತ್ತುರಾಜ(3) ಎಂದು ಗುರುತಿಸಲಾಗಿದೆ.
ತಮ್ಮ ಕೌಟುಂಬಿಕ ಕಲಹದಿಂದ ಬೇಸರಗೊಂಡಿದ್ದ ಮಹಿಳೆ ತವರುಮನೆಗೆ ಹೊರಟಿದ್ದಳು. ಈ ವೇಳೆ ಅಲ್ಲಿಗೆ ಬಂದ ಆರೋಪಿ ಊರಿಗೆ ಹೋಗೋಣ ಎಂದು ಬೈಕ್’ನಲ್ಲಿ ಕೂರಿಸಿಕೊಂಡು ಹೊರವಲಯಕ್ಕೆ ಕರೆದುಕೊಂಡು ಬಂದಿದ್ದಾನೆ.
Also read: ಟೈಟಲ್ ಟೀಸರ್’ನಲ್ಲೆ ನೋಡುಗರ ಮನ ಗೆಲ್ಲುತ್ತಿದೆ ಆಟ ಸಾಮಾನು..
ಈ ವೇಳೆ ಇಬ್ಬರ ನಡುವೆ ಜಗಳ ವಿಕೋಪಕ್ಕೆ ತಿರುಗಿ ಆರೋಪಿ ತನ್ನ ಪತ್ನಿಯ ಮೇಲೆ ಮನಬಂದಂತೆ ಮಕ್ಕಳ ಎದುರಿಗೇ ಹೊಡೆದಿದ್ದಾನೆ. ಪರಿಣಾಮವಾಗಿ ಆಕೆ ಮೃತಪಟ್ಟಿದ್ದಾಳೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post