ನವದೆಹಲಿ: ಕಾಂಗ್ರೆಸ್ ಸಾಮಾಜಿಕ ಮೀಡಿಯಾ ಸೆಲ್ ಮುಖ್ಯಸ್ಥೆ ಸ್ಥಾನಕ್ಕೆ ರಮ್ಯಾ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದ್ದು, ರಾಷ್ಟ್ರೀಯ ಮಾಧ್ಯಮವೊಂದು ಈ ಕುರಿತಂತೆ ವಿಸ್ತೃತ ವರದಿ ಪ್ರಕಟಿಸಿದೆ.
ವರದಿಯಂತೆ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮ್ಯಾ ಅವರಿಗೆ ಕಾಂಗ್ರೆಸ್‌ನಲ್ಲಿ ಬೇರೊಂದು ಹುದ್ದೆಯನ್ನು ನೀಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಆದರೆ, ಈ ಕುರಿತಂತೆ ಪಕ್ಷ ಅಧಿಕೃತ ಪ್ರಕಟಣೆಯನ್ನು ಮಾತ್ರ ನೀಡಿಲ್ಲ.
ರಾಫೇಲ್ ಡೀಲ್ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಬರದಲ್ಲಿ ಪ್ರಧಾನಿ ಓರ್ವ ಕಳ್ಳ ಎಂದು ಟ್ವೀಟ್ ಮಾಡಿದ್ದ ರಮ್ಯ ವಿರುದ್ಧ ದೇಶದ್ರೋಹದ ಪ್ರಕರಣದ ಅಡಿಯಲ್ಲಿ, ಎಫ್‌ಐಆರ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಮ್ಯಾ ಅವರ ಈ ಕೆಲಸಕ್ಕೆ ಪಕ್ಷದೊಳಗೇ ಅಸಮಾಧಾನ ಇದೆ ಎಂದು ಹೇಳಲಾಗಿದೆ. ಹೀಗಾಗಿ, ಅವರಿಗೆ ಸಾಮಾಜಿಕ ಜಾಲತಾಣದ ಬದಲಾಗಿ ಬೇರೊಂದು ಜವಾಬ್ದಾರಿ ನೀಡಲಾಗುತ್ತದೆ ಎನ್ನಲಾಗಿದೆ.
Discussion about this post