ಕಲ್ಪ ಮೀಡಿಯಾ ಹೌಸ್ | ರಾಂಚಿ |
ತಾಯಿಯ ಎದುರೇ ಅಪ್ರಾಪ್ತ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ.
ಸಂತ್ರಸ್ತ ಬಾಲಕಿ ದಮ್ಕಾ ಜಿಲ್ಲೆಯವರಾಗಿದ್ದು, ದಿಯೋಘರ್‌ನಲ್ಲಿ ನಡೆದ ಸಮಾರಂಭವೊಂದರಲ್ಲಿ ಭಾಗವಹಿಸಿ ಬಾಲಕಿ ಹಾಗೂ ಆಕೆಯ ತಾಯಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Also read: ದಕ್ಷಿಣ ಭಾರತದ ಮಹಾ ಕುಂಭಮೇಳಕ್ಕೆ ಸಕಲ ಸಿದ್ದತೆ: 6 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ
ಇದನ್ನು ತಡೆಯಲು ಹೋದಾಗ ತಮ್ಮನ್ನು ಥಳಿಸಿದ್ದಾರೆ ಎಂದು ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಘಟನೆ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ದಿಯೋಘರ್ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.











Discussion about this post