ಕಲ್ಪ ಮೀಡಿಯಾ ಹೌಸ್ | ರಾಂಚಿ |
ಬಹುಕೋಟಿ ರೂಪಾಯಿ ಮೇವು ಹಗರಣ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ದೋಷಿ ಅವರನ್ನು ಎಂದು ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ.
ಇಂದು ಬೆಳಗ್ಗೆ ಸಿಬಿಐ ವಿಶೇಷ ನ್ಯಾಯಾಲಯ ಮುಂದೆ ವಿಚಾರಣೆಗೆ ಲಾಲೂ ಪ್ರಸಾದ್ ಯಾದವ್ ಆಗಮಿಸಿದ್ದರು. ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಐದನೇ ಮತ್ತು ಅಂತಿಮ ತೀರ್ಪು ನೀಡಿದ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ ಇತರ 75 ಆರೋಪಿಗಳೊಂದಿಗೆ ಲಾಲು ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.
ಸಾಕಷ್ಟು ಸಾಕ್ಷ್ಯಾಧಾರಗಳಿಲ್ಲದ ಕಾರಣ 6 ಮಹಿಳೆಯರು ಸೇರಿದಂತೆ 24 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಧೀಶ ಎಸ್.ಕೆ. ಶಶಿ ಅವರು ಖುಲಾಸೆಗೊಳಿಸಿದ್ದಾರೆ.
ಲಾಲೂ ಪ್ರಸಾದ್ ಯಾದವ್ ಅವರಿಗೆ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 18 ರಂದು ಘೋಷಿಸಲಾಗುವುದು ಎಂದು ನ್ಯಾಯಾಲಯ ಇದೇ ವೇಳೆ ಪ್ರಕಟಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post