ಕಲ್ಪ ಮೀಡಿಯಾ ಹೌಸ್ | ರಾಣೆಬೆನ್ನೂರು |
ಗ್ರಾಮಾಂತರ ಪ್ರದೇಶದಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ವ್ಯವಸ್ಥಿತ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್‌ಗೆ ಮನವಿ ಸಲ್ಲಿಸಲಾಯಿತು.
2021-2022ನೇ ಸಾಲಿನ ಸದಸ್ಯತ್ವ ನೋಂದಣಿ ಮಾಡುವ ಸಂದರ್ಭದಲ್ಲಿ ಅನೇಕ ವಿದ್ಯಾರ್ಥಿಗಳು ಬಸ್‌ನ ಸಮಸ್ಯೆಯನ್ನು ಎದುರಿಸುತ್ತಿರುವ ಬಗ್ಗೆ ರಾಣಿಬೆನ್ನೂರು ಎಬಿವಿಪಿ ಕಾರ್ಯಕರ್ತರಿಗೆ ತಿಳಿಸಿದರು. ಇದನ್ನು ಮನಗಂಡ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಸ್ವೀಕರಿಸಿ, ನೂರಾರು ಗ್ರಾಮಗಳಿಂದ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಸಂಚರಿಸುತ್ತಾರೆ. ಆ ಕಾರಣದಿಂದ ಎಲ್ಲಾ ಮಾರ್ಗಗಳಿಗೆ ಸಮಯಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.
ಸೆ. 30ರ ಒಳಗಾಗಿ ನಮ್ಮ ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ ರಾಣಿಬೆನ್ನೂರು ಬಸ್‌ನಿಲ್ದಾಣದಲ್ಲಿ ಬಸ್‌ಗಳನ್ನು ತಡೆದು ಬೃಹತ್ ಹೋರಾಟ ಮಾಡಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತರಾದ ನವೀನ್, ಮಲ್ಲೇಶಪ್ಪ, ನಾಗರಾಜ, ಮಲ್ಲಿಕಾರ್ಜುನ, ಬಸವರಾಜ, ಜಲಾಲೀ, ರಾಕೇಶ, ನಗರ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಯಕ್ ಇನ್ನಿತರರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post