ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಪೋಸ್ಕೋ ಕಾಯ್ದೆಯಡಿಯಲ್ಲಿ ದಾಖಲಾದ ಯಾವುದೇ ಅತ್ಯಾಚಾರ ಪ್ರಕರಣದ ಆರೋಪಿಗಳ ಕ್ಷಮಾದಾನ ಅರ್ಜಿಯನ್ನು ನಾವು ಪರಿಗಣಿಸುವುದೇ ಇಲ್ಲ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹೇಳಿದ್ದಾರೆ.
ಈ ಕುರಿತಂತೆ ಇಂದು ಮಾತನಾಡಿರುವ ಅವರು, ಸಮಾಜದಲ್ಲಿ ಮಹಿಳೆಯರ ರಕ್ಷಣೆ ಅತ್ಯಂತ ಗಂಭೀರ ವಿಚಾರವಾಗಿದೆ. ಈ ಹಿನ್ನೆಲೆಯಲ್ಲಿ ಅತ್ಯಾಚಾರ ಪ್ರಕರಣದ ಯಾವುದೇ ಆರೋಪಿಗಳ ಕ್ಷಮಾದಾನ ಅರ್ಜಿಯನ್ನು ನಾವು ಪರಿಗಣಿಸುವುದೇ ಇಲ್ಲ. ಪೋಸ್ಕೋ ಕಾಯ್ದೆಯಡಿಯಲ್ಲಿ ಅತ್ಯಾಚಾರ ಆರೋಪಿಗಳ ಕ್ಷಮಾದಾನ ಅರ್ಜಿ ಸಲ್ಲಿಸುವ ಅಧಿಕಾರವೇ ಇಲ್ಲ. ಇಂತಹ ಅರ್ಜಿಯನ್ನು ಸಂಸತ್ ಪರಿಶೀಲನೆ ನಡೆಸಬಹುದು ಎಂದಿದ್ದಾರೆ.
Get in Touch With Us info@kalpa.news Whatsapp: 9481252093
















