ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನೋತ್ಸವದ ಅಂಗವಾಗಿ ಶಿವಮೊಗ್ಗದ ಜ್ಞಾನ ಕ್ಷೇತ್ರದಲ್ಲಿ ಭಕ್ತಿಪೂರ್ವಕವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ಸಾದ್ವಿ ಶುಭಕರಿ ಜೀ ಅವರ ಸಾನ್ನಿಧ್ಯದಲ್ಲಿ ಗುರು ಪೂಜೆ, ರುದ್ರ ಪೂಜೆ ಹಾಗೂ ದಿವ್ಯ ಸತ್ಸಂಗ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ಆಯೋಜಿಸಲಾಯಿತು
ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಕೆ.ಈ. ಕಾಂತೇಶ್ ಕುಟುಂಬ ಸಮೇತರಾಗಿ ಭಾಗವಹಿಸಿ ಸಾದ್ವಿ ಶುಭಕರಿ ಜೀ ಅವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಯೋಗ, ಧ್ಯಾನ ಮತ್ತು ಮಾನವೀಯ ಮೌಲ್ಯಗಳನ್ನು ವಿಶ್ವದಾದ್ಯಂತ ಪಸರಿಸುವಲ್ಲಿ ಗುರುದೇವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು. ಸುದರ್ಶನ ಕ್ರಿಯೆ, ಧ್ಯಾನ ಮತ್ತು ಸತ್ಸಂಗಗಳ ಮೂಲಕ ಲಕ್ಷಾಂತರ ಜನರು ನೆಮ್ಮದಿ ಹಾಗೂ ಆತ್ಮವಿಕಾಸದ ದಾರಿಯಲ್ಲಿ ಸಾಗುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಹಿರಿಯ ಶಿಕ್ಷಕರಾದ ಚಂದ್ರಹಾಸ್, ಶಬರೀಶ್ ಕಣ್ಣನ್ ಸೇರಿದಂತೆ ಅನೇಕ ಭಕ್ತರು ಉಪಸ್ಥಿತರಿದ್ದು, ಗುರುದೇವರ ಜನ್ಮದಿನೋತ್ಸವವನ್ನು ಭಕ್ತಿಭಾವದಿಂದ ಆಚರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















