No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಹಕಾರಿ ಬ್ಯಾಂಕ್ ನಿರ್ದೇಶಕರಿಗೆ 3 ವರ್ಷ ಕೂಲಿಂಗ್ ಪಿರಿಯಡ್: ಆರ್‌ಬಿಐ ಆದೇಶ ಹಿಂಪಡೆಯಲು ಆಗ್ರಹ

kalpa News by kalpa News
August 24, 2026
in ಶಿವಮೊಗ್ಗ
0
rbi-cooperative-bank-directors-3-year-cooling-period
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗ್ರಾಮೀಣ ಸಹಕಾರಿ ಬ್ಯಾಂಕುಗಳಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊರಡಿಸಿರುವ ತಿದ್ದುಪಡಿ ನಿರ್ದೇಶನಗಳು ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಮಾರಕವಾಗಿದ್ದು, ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಸಹಕಾರಿ ಹಿರಿಯ ಧುರೀಣ ಹಾಗೂ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕ ಎಸ್.ಪಿ. ಶೇಷಾದ್ರಿ ಒತ್ತಾಯಿಸಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮತ್ತು ಜಿಲ್ಲಾ ಸಹಕಾರಿ ಬ್ಯಾಂಕುಗಳ ನಿರ್ದೇಶಕರಿಗೆ ಸಂಬಂಧಿಸಿದಂತೆ ಆರ್‌ಬಿಐ ಹೊರಡಿಸಿರುವ ತಿದ್ದುಪಡಿ ನಿಯಮಗಳನ್ನು ತೀವ್ರವಾಗಿ ವಿರೋಧಿಸಿದರು.Kumadvathi College Shikariura

10 ವರ್ಷಗಳ ಬಳಿಕ 3 ವರ್ಷಗಳ ಕೂಲಿಂಗ್ ಪಿರಿಯಡ್

ಆರ್‌ಬಿಐನ ನಿಯಮ 7ಎ ಪ್ರಕಾರ, ರಾಜ್ಯ ಮತ್ತು ಜಿಲ್ಲಾ ಸಹಕಾರಿ ಬ್ಯಾಂಕುಗಳ ನಿರ್ದೇಶಕರು ನಿರಂತರವಾಗಿ 10 ವರ್ಷಗಳ ಸೇವೆ ಸಲ್ಲಿಸಿದ ನಂತರ ಕಡ್ಡಾಯವಾಗಿ 3 ವರ್ಷಗಳ ಕೂಲಿಂಗ್ ಪಿರಿಯಡ್ ತೆಗೆದುಕೊಳ್ಳಬೇಕು ಎಂಬ ನಿಯಮವನ್ನು ಜಾರಿಗೆ ತರಲಾಗಿದೆ. ಆದರೆ ಈ ನಿಯಮವು ಸಹಕಾರಿ ತತ್ವಕ್ಕೆ ವಿರುದ್ಧವಾಗಿದೆ ಎಂದು ಶೇಷಾದ್ರಿ ಅಭಿಪ್ರಾಯಪಟ್ಟರು.

ಲಕ್ಷಾಂತರ ಸಹಕಾರಿಗಳು ಹಾಗೂ ರೈತರು ತಮ್ಮ ಜೀವನವನ್ನೇ ಸಹಕಾರಿ ಚಳವಳಿಗೆ ಮುಡಿಪಾಗಿಟ್ಟಿದ್ದಾರೆ. ಇಂತಹ ಹಿರಿಯ ಮತ್ತು ಅನುಭವಿ ವ್ಯಕ್ತಿಗಳನ್ನು ಕೇವಲ 10 ವರ್ಷಗಳ ಸೇವಾವಧಿಯ ನೆಪದಲ್ಲಿ ದೂರವಿಡುವುದು ಅವರ ಅನುಭವ ಮತ್ತು ಸೇವೆಗೆ ಮಾಡಿದ ಅಪಮಾನವಾಗಿದೆ ಎಂದು ಅವರು ಹೇಳಿದರು.

Also read>> ಬ್ರಹ್ಮಾವರದಲ್ಲಿ ಭೀಕರ ಘಟನೆ: ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪುತ್ರ

ಚುನಾಯಿತ ಪ್ರತಿನಿಧಿಗಳಿಗೆ ಮಾತ್ರ ಏಕೆ ಕೂಲಿಂಗ್ ಪಿರಿಯಡ್?

ಮೂರು ವರ್ಷಗಳ ಕೂಲಿಂಗ್ ಪಿರಿಯಡ್ ಅನ್ನು ಕೇವಲ ಸಹಕಾರಿ ಕ್ಷೇತ್ರದ ಚುನಾಯಿತ ಪ್ರತಿನಿಧಿಗಳಿಗೆ ಮಾತ್ರ ಜಾರಿಗೆ ತರಲಾಗಿದೆ. ಆದರೆ ಇತರೆ ಕ್ಷೇತ್ರಗಳ ಚುನಾಯಿತ ಪ್ರತಿನಿಧಿಗಳಾದ ಸಂಸದರು, ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ಇಂತಹ ಕೂಲಿಂಗ್ ಪಿರಿಯಡ್ ಜಾರಿಯಲ್ಲಿಲ್ಲ ಎಂದು ಅವರು ಪ್ರಶ್ನಿಸಿದರು.

ಸಹಕಾರಿ ಕ್ಷೇತ್ರದ ಚುನಾಯಿತ ಪ್ರತಿನಿಧಿಗಳಿಗೆ ಮಾತ್ರ ಈ ನಿಯಮವನ್ನು ಅನ್ವಯಿಸುವುದು ಸಾಮಾಜಿಕ ಅನ್ಯಾಯ ಮಾಡಿದಂತಾಗಿದೆ ಎಂದು ಅವರು ಆರೋಪಿಸಿದರು.PES Shivamogga

ಅನುಭವದ ಕೊರತೆಯಿಂದ ಸಂಸ್ಥೆಗಳಿಗೆ ನಷ್ಟದ ಆತಂಕ

ಸಹಕಾರಿ ಬ್ಯಾಂಕಿಂಗ್ ಎಂಬುದು ಸಾಮಾನ್ಯ ವಾಣಿಜ್ಯ ಬ್ಯಾಂಕಿಂಗ್ ವ್ಯವಸ್ಥೆಯಲ್ಲ. ಇದು ರೈತರು, ಪಿಎಲ್‌ಡಿ, ಡಿಸಿಸಿ ಬ್ಯಾಂಕುಗಳು ಹಾಗೂ ಗ್ರಾಮೀಣ ಸಾಲ ವ್ಯವಸ್ಥೆಯ ಸೂಕ್ಷ್ಮತೆಗಳನ್ನು ಅರಿತಿರಬೇಕಾದ ವಿಶಿಷ್ಟ ಕ್ಷೇತ್ರವಾಗಿದೆ ಎಂದು ಶೇಷಾದ್ರಿ ಹೇಳಿದರು.

ಅನುಭವವೇ ಇಲ್ಲದ ಹೊಸಬರು ನಿರ್ದೇಶಕರಾಗಿ ಬಂದರೆ, ಸಹಕಾರಿ ಕ್ಷೇತ್ರದ ಕಾರ್ಯವೈಖರಿಯ ಬಗ್ಗೆ ಸಮರ್ಪಕ ಅರಿವಿಲ್ಲದೆ ತಪ್ಪು ನಿರ್ಧಾರಗಳು ಕೈಗೊಳ್ಳುವ ಸಾಧ್ಯತೆ ಇದೆ. ಇದರಿಂದ ಸಹಕಾರಿ ಸಂಸ್ಥೆಗಳಿಗೆ ನಷ್ಟ ಉಂಟಾಗಿ, ಅದರ ಅಂತಿಮ ಹೊಡೆತ ರೈತ ಸದಸ್ಯರ ಮೇಲೆ ಬೀಳಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಅಮಿತ್ ಶಾ ಮಧ್ಯಪ್ರವೇಶಕ್ಕೆ ಒತ್ತಾಯ

ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಈ ತಿದ್ದುಪಡಿ ನಿಯಮವನ್ನು ಪುನಃ ಪರಿಶೀಲಿಸಬೇಕು. ಸಹಕಾರಿ ಕ್ಷೇತ್ರವು ಮೊದಲಿನ ರೀತಿಯಲ್ಲಿಯೇ ತನ್ನ ಕಾರ್ಯಚಟುವಟಿಕೆಗಳನ್ನು ಮುಂದುವರಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಈ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಧ್ಯಪ್ರವೇಶಿಸಿ, ಆರ್‌ಬಿಐಗೆ ಸೂಕ್ತ ಮನವಿ ಸಲ್ಲಿಸುವ ಮೂಲಕ ಸಹಕಾರಿ ಕ್ಷೇತ್ರದ ಹಿತಾಸಕ್ತಿಗೆ ವಿರುದ್ಧವಾದ ತಿದ್ದುಪಡಿ ನಿರ್ದೇಶನವನ್ನು ಹಿಂಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಎಸ್.ಪಿ. ಶೇಷಾದ್ರಿ ಆಗ್ರಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKalpa News Advertising DisclaimerKalahamsa Infotech private limited

Tags: Cooling PeriodCooperativeBankRBIS P SheshadriShivamoggaಶಿವಮೊಗ್ಗ
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಬ್ರಹ್ಮಾವರದಲ್ಲಿ ಭೀಕರ ಘಟನೆ: ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪುತ್ರ

Next Post

ಅನಧಿಕೃತ ಕಸಾಯಿ ಖಾನೆಗಳ ವಿರುದ್ಧ ಕ್ರಮಕ್ಕೆ ಆಗ್ರಹ: ಶಿವಮೊಗ್ಗದಲ್ಲಿ ವಿಹಿಂಪ, ಬಜರಂಗದಳ ಪ್ರತಿಭಟನೆ

kalpa News

kalpa News

Next Post
shivamogga-vhp-protest-illegal-slaughterhouses

ಅನಧಿಕೃತ ಕಸಾಯಿ ಖಾನೆಗಳ ವಿರುದ್ಧ ಕ್ರಮಕ್ಕೆ ಆಗ್ರಹ: ಶಿವಮೊಗ್ಗದಲ್ಲಿ ವಿಹಿಂಪ, ಬಜರಂಗದಳ ಪ್ರತಿಭಟನೆ

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL