ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರ್’ಡಿಎಕ್ಸ್ ಪತ್ತೆಯಾಗಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾತ್ರಿ 1 ಗಂಟೆ ವೇಳೆಗೆ ನಿಲ್ದಾಣದ ಟರ್ಮಿನಲ್-3ರಲ್ಲಿ ಕಪ್ಪು ಬಣ್ಣದ ಬ್ಯಾಗ್ ಒಂದು ಅನುಮಾನಾಸ್ಪದವಾಗಿ ಪತ್ತೆಯಾಗಿತ್ತು. ಸಿಐಎಸ್’ಎಫ್ ಸಿಬ್ಬಂದಿ ಇದನ್ನು ಪತ್ತೆ ಮಾಡಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಆದರೂ, ಮುಂಜಾಗ್ರತಾ ಕ್ರಮವಾಗಿ ಈ ಟರ್ಮಿನಲ್ ಬಳಿಯಲ್ಲಿ ಎಲ್ಲ ಪ್ರಯಾಣಿಕರಿಗೆ ನಿರ್ಬಂಧ ಹೇರಲಾಗಿದ್ದು, ಇಡಿಯ ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
Get In Touch With Us info@kalpa.news Whatsapp: 9481252093, 94487 22200
Discussion about this post