ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕಳೆದ ಮಳೆಗೆ ತತ್ತರಿಸಿ ಹೋಗಿದ್ದ ಭದ್ರಾವತಿಯಲ್ಲಿ ಇಂದು ಮತ್ತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ತುರ್ತು ಪರಿಸ್ಥಿತಿ ಎದುರಿಸಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ.
ಹವಾಮಾನ ಇಲಾಖೆಯ ಮಾಹಿತಿ ಆಧಾರದಲ್ಲಿ ತಹಶೀಲ್ದಾರ್ ಪ್ರದೀಪ್ ನಿಕ್ಕಂ ಅವರು ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಎಂತಹ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.
ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯಕ್ಕೆ 31,069 ಕ್ಯೂಸೆನ್ಸ್ ನೀರು ಹರಿದುಬರುತ್ತಿದ್ದು, ಪರಿಣಾಮವಾಗಿ 35, 175 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈ ಪರಿಣಾಮವಾಗಿ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಹೊಸ ಸೇತುವೆ ಮತ್ತೆ ಮುಳುಗಡೆ ಹಂತಕ್ಕೆ ಬಂದು ತಲುಪಿದೆ.
ಇನ್ನು, ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯನ್ನು ಎದುರಿಸಲು ತಾಲೂಕು ಆಡಳಿತ ಎಲ್ಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಕಾಳಜಿ ಕೇಂದ್ರಗಳನ್ನು ತೆರೆಯಲೂ ಸಹ ಸಿದ್ದತೆ ಮಾಡಿಕೊಳ್ಳಲಾಗಿದೆ. ಅಲ್ಲದೇ, ತಗ್ಗು ಪ್ರದೇಶಗಳಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post