ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಜಿಲ್ಲೆಯಾದ್ಯಂತ ವರುಣನ ಆರ್ಭಟ ಹೆಚ್ಚಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜುಲೈ 25ರಂದು ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಜುಲೈ 25ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಇದೇ ವೇಳೆ, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳನ್ನು ವಾಸಿಸುವ ಜನರು ಎಚ್ಚರಿಕೆ ಇಂದ ಇರುವಂತೆ ಸೂಚಿಸಲಾಗಿದೆ.
ಅಲ್ಲದೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಪ್ರವಾಸಿಗರು ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post