ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರೀ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ #Shivamogga ಜಿಲ್ಲೆಯಾದ್ಯಂತ ಜುಲೈ 18ರ ಇಂದೂ ಸಹ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತೆ ನಿರಂತರವಾಗಿ ಭಾರೀ ಮಳೆ #HeavyRain ಸುರಿಯುತ್ತಿರುವ ಬೆನ್ನಲ್ಲೇ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ, ಪದವಿ ಕಾಲೇಜು, ಪಿಯು ಹಾಗೂ ಡಿಪ್ಲೊಮಾ ಕಾಲೇಜು ಸೇರಿದಂತೆ ಎಲ್ಲ ವಿದ್ಯಾಸಂಸ್ಥೆಗಳಿಗೆ ರಜೆ ಅನ್ವಯವಾಗುತ್ತದೆ ಎಂದು ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post