ಬೆಂಗಳೂರು: ಜನರ ಪ್ರಾತಿನಿಧ್ಯ ಹಕ್ಕನ್ನು ಉಲ್ಲಂಘನೆ ಮಾಡಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಕಾಶ್ ರೈ ಅವರ ನಾಮಪತ್ರವನ್ನು ತಿರಸ್ಕರಿಸಿ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಜಗನ್ ಕುಮಾರ್ ಎಂಬ ಸಾಮಾಜಿಕ ಕಾರ್ಯಕರ್ತರು ದೂರು ಸಲ್ಲಿಸಿದ್ದು, ಪ್ರಕಾಶ್ ರೈ ಅವರು ಮೂರು ರಾಜ್ಯಗಳ ನಾಲ್ಕು ವೋಟರ್ ಐಡಿಯನ್ನು ಹೊಂದಿದ್ದಾರೆ. ಇದು ಜನರ ಪ್ರಾತಿನಿಧ್ಯ ಉಲ್ಲಂಘನೆಯಾಗಿದೆ. ಹೀಗಾಗಿ, ಅವರ ನಾಮಪತ್ರವನ್ನು ತಿರಸ್ಕರಿಸಿ ಎಂದು ಮನವಿ ಮಾಡಿದ್ದಾರೆ.
ಪ್ರಕಾಶ್ ರೈ ಅವರು ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
Discussion about this post