ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದಕ್ಷಿಣ ಭಾರತ ಖ್ಯಾತ ಕಂಪನಿ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಡಾ.ಸಿ.ಜೆ. ರಾಯ್ ಅವರು ಇಂದು ಸಂಜೆ ತಮ್ಮ ಕಚೇರಿಯಲ್ಲಿಯೇ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದುಸಂಜೆ ಬೆಂಗಳೂರಿನ ಆನೇಪಾಳ್ಯದಲ್ಲಿರೋ ತಮ್ಮ ಕಚೇರಿಯಲ್ಲಿ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಕೇರಳ ಮೂಲದ ರಾವ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು.
ಇಂದು ಕಾನ್ಫಿಡೆಂಡ್ ಗ್ರೂಪ್ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ರೀತಿ ಕಳೆದ ಮೂರು ವರ್ಷಗಳಿಂದ ಐಟಿ ದಾಳಿ ನಡೆಯುತ್ತಿತ್ತು. ಇದರಿಂದ ಬೇಸತ್ತಿದ್ದ ಉದ್ಯಮಿ ಇಂದು ದಾಳಿ ವೇಳೆ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಘಟನೆ ಕುರಿತು ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಎಂ ಹಾಕೆ ಅವರು ಐಟಿ ಅಧಿಕಾರಿಗಳ ಬಳಿ ಮಾಹಿತಿ ಕಲೆಹಾಕುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















