ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ #Darshan ಪವಿತ್ರಾ ಗೌಡಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದರ್ಶನ್ ಮಾತ್ರವಲ್ಲದೇ ಮೊದಲ ಆರೋಪಿ ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಲಾಗಿದೆ.

Also Read: ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್ ಅರೆಸ್ಟ್ | ಕಾರಣವೇನು?
ಕಳೆದ ಕಳೆದ 6 ತಿಂಗಳಿಂದ ಜೈಲಲ್ಲಿ ಇದ್ದ ಪವಿತ್ರಾಗೌಡ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಒಟ್ಟಾರೆಯಾಗಿ ಆರೋಪಿಗಳಾದ ಪವಿತ್ರಾಗೌಡ, ದರ್ಶನ್, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಹಾಗೂ ಪ್ರದೂಷ್ ಗೆ ಜಾಮೀನು ಮಂಜೂರಾಗಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆ ಆಗಿ ಹೊರಗೆ ಬರಲಿದ್ದಾರೆ.
ಘಟನೆ ನಡೆದ 6 ತಿಂಗಳ ಬಳಿಕ ದರ್ಶನ್ ಗೆ ಜಾಮೀನು ಮಂಜೂರಾಗಿದೆ. ಇತ್ತೀಚೆಗೆ ದರ್ಶನ್ ಗೆ #Darshan ಬೆನ್ನುನೋವು ಇದ್ದ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ಸದ್ಯ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಇನ್ನು ಕೂಡ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post