ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್’ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.
ಈ ಕುರಿತಂತೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದ್ದು, ತತಕ್ಷಣವೇ ದರ್ಶನ್’ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಿ ಎಂದು ಸೂಚನೆ ನೀಡಿದೆ.
ಅಲ್ಲದೇ, ಪ್ರಕರಣದ ಎಲ್ಲ ಆರೋಪಿಗಳನ್ನು ಬೇರೆ ಬೇರೆ ನಗರಗಳಲ್ಲಿರುವ ಜೈಲಿಗಳಿಗೆ ಸ್ಥಳಾಂತರ ಮಾಡುವಂತೆಯೂ ಸಹ ಆದೇಶಿಸಿದ್ದು, ವಿವರ ತಿಳಿದುಬರಬೇಕಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಶೀಟರ್ ನಾಗನ ಜೊತೆಯಲ್ಲಿ ರೆಸಾರ್ಟ್’ನಲ್ಲಿ ಕುಳಿತಂತೆ ದರ್ಶನ್ ಸಿಗರೇಟ್ ಹಾಗೂ ಟೀ ಜೊತೆಯಲ್ಲಿ ಕುಳಿತ ಹಾಗೂ ವೀಡಿಯೋ ಕಾಲ್ ಮೂಲಕ ಮಾತನಾಡಿದ ಸುದ್ದಿ ಹೊರಬಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post