ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ #RenukaswamyMurderCase ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಐದು ಜನರ ಜಾಮೀನನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ #SupremeCourt ನಿರಾಕರಿಸಿದ್ದು, ಈ ಮೂಲಕ ಚಾಲೆಂಜಿಂಗ್ ಸ್ಟಾರ್’ಗೆ ಗುಡ್ ನ್ಯೂಸ್ ನೀಡಿದೆ.
ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ನಟ ದರ್ಶನ್ #Darshan ಸೇರಿದಂತೆ ಏಳು ಮಂದಿಯ ಜಾಮೀನು ರದ್ದು ಮಾಡುವಂತೆ ಕೋರಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್ ಇದನ್ನು ನಿರಾಕರಿಸಿದೆ. ಆದರೆ, ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಆಕ್ಷೇಪಣೆ ಅರ್ಜಿಯನ್ನು ಪರಿಶೀಲಿಸಲು ಒಪ್ಪಿಕೊಂಡಿದೆ.
Also Read>> ಬೆಂಗಳೂರು | ಗಣರಾಜ್ಯೋತ್ಸವ ಪೆರೇಡ್’ಗೆ ಶ್ರೀವಾಣಿ ವಿದ್ಯಾಕೇಂದ್ರದ ಅನ್ವಿತಾ ಸಾವಿತ್ರಿ ಭಟ್ ಆಯ್ಕೆ
ಇದೇ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ #HighCourt ಜಾಮೀನು ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು ದರ್ಶನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.

ಕೊಲೆ ಪ್ರಕರಣದಲ್ಲಿ ಕಳೆದ ವರ್ಷ ಜೂನ್ 11ರಂದು ಬಂಧಿತರಾಗಿದ್ದ ನಟ ದರ್ಶನ್ ಸೇರಿ ಇತರ ಆರೋಪಿಗಳಿಗೆ ಹೈಕೋರ್ಟ್ ಕಳೆದ ವರ್ಷ ಡಿ. 13ರಂದು ಜಾಮೀನು ನೀಡಿತ್ತು.
ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ ಎಂಬ ಸಿಟ್ಟಿನಲ್ಲಿ ಕಳೆದ ವರ್ಷ ಜೂನ್ 8 ರಂದು ತನ್ನ ಅಭಿಮಾನಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಂದ ಆರೋಪದ ಮೇಲೆ ದರ್ಶನ್ ಅವರನ್ನು ಬಂಧಿಸಲಾಗಿತ್ತು. 33 ವರ್ಷದ ರೇಣುಕಸ್ವಾಮಿ ಮೃತದೇಹ ಕಳೆದ ವರ್ಷ ಜೂನ್ 9ರಂದು ಬೆಂಗಳೂರಿನ ಮೋರಿಯೊಂದರಲ್ಲಿ ಪತ್ತೆಯಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post