ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಕ್ಕಳ ಆರೋಗ್ಯ ದೃಷ್ಠಿಯಿಂದ ನೀರು #Water ಕುಡಿಯುವುದು ಅಗತ್ಯವಾಗಿದ್ದು, ಇದಕ್ಕಾಗಿ ಇನ್ಮುಂದೆ ರಾಜ್ಯದ ಶಾಲೆಗಳಲ್ಲಿ ವಾಟರ್ ಬೆಲ್(ನೀರಿನ ಗಂಟೆ) #WaterBell ಬಾರಿಸುವುದು ಕಡ್ಡಾಯ ಮಾಡಲಾಗಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ಶಾಲೆಗಳಲ್ಲಿ ನೀರಿನ ಗಂಟೆ (ವಾಟರ್ ಬೆಲ್) ಬಾರಿಸುವುದನ್ನು ಕಡ್ಡಾಯಗೊಳಿಸಿದೆ.
ಆರೋಗ್ಯ, ಬೆಳವಣಿಗೆ ದೃಷ್ಟಿಯಿಂದ ಮಕ್ಕಳು ನಿತ್ಯವೂ ನಿಗದಿತ ಪ್ರಮಾಣದಲ್ಲಿ ನೀರು ಕುಡಿಯಬೇಕು. ಆದರೆ, ಮಕ್ಕಳಿಗೆ ಈ ಕುರಿತು ಸೂಕ್ತ ಅರಿವು ಇರುವುದಿಲ್ಲ. ಅದಕ್ಕಾಗಿ ಶಾಲಾ ಅವಧಿಯಲ್ಲಿ ಮಕ್ಕಳು ನಿಯಮಿತವಾಗಿ ನೀರು ಕುಡಿಯುವುದನ್ನು ನೆನಪಿಸಬೇಕಾದುದು ಶಿಕ್ಷಕರು ಮತ್ತು ಸಿಬ್ಬಂದಿಯ ಜವಾಬ್ದಾರಿಯೂ ಆಗಿದೆ.
ಮಧ್ಯಾಹ್ನದ ಬಿಸಿಯೂಟ, ಆಟದ ಸಮಯದಲ್ಲಿ ನೀರು ಲಭ್ಯ ಇರುವಂತೆ ನೋಡಿಕೊಳ್ಳಬೇಕು. ಎಲ್’ಕೆಜಿ, ಯುಕೆಜಿ ಒಳಗೊಂಡಂತೆ ಎಲ್ಲ ಹಂತದಲ್ಲೂ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಈ ನಿಯಮ ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ರಾಜ್ಯದ 61 ಶಾಲೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲ ಮತ್ತು ಅವುಗಳಲ್ಲಿ 170 ಶಾಲೆಗಳಲ್ಲಿ ಸರಿಯಾದ ಶೌಚಾಲಯ ಸೌಲಭ್ಯಗಳಿಲ್ಲ ಎಂಬ ವಾಸ್ತವವನ್ನು ಅಧಿಕಾರಿಗಳು ಮರೆತಂತೆ ತೋರುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಲಭ್ಯವಿರುವ ದತ್ತಾಂಶಗಳು ಬಹಿರಂಗಪಡಿಸುತ್ತವೆ.
“ನೀರಿನ ಗಂಟೆ ಮಕ್ಕಳಿಗೆ ಆಗಾಗ್ಗೆ ನೀರು ಕುಡಿಯಲು ನೆನಪಿಸುತ್ತದೆ, ಇದು ಚಯಾಪಚಯ, ಜಲಸಂಚಯನ ಮತ್ತು ಇತರ ಆರೋಗ್ಯ ಅಂಶಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಎಲ್‌ಕೆಜಿಯಿಂದ 10 ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು” ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















