ಕಲ್ಪ ಮೀಡಿಯಾ ಹೌಸ್ | ರಿಪ್ಪನ್‌ಪೇಟೆ |
ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ ಅಪಘಾತವಾದ #Bus accident ಪರಿಣಾಮ 29 ಮಂದಿ ಗಾಯಗೊಂಡಿರುವ ಘಟನೆ ಮುಂಡಳ್ಳಿ ಸಮೀಪ ನರ್ತಿಗೆ ಬಳಿ ನಡೆದಿದೆ.
ಚಾಮರಾಜನಗರ #Chamarajanagara ಯಳಂದೂರಿನ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ.
ಚಾಮರಾಜನಗರ ಜಿಲ್ಲೆಯ ಮಸಣಪುರದ ಬಸ್ ಚಾಲಕ ಸುರೇಶ್ ತಲೆಗೆ ಗಂಭೀರ ಗಾಯಗಳಾಗಿದ್ದು, ಶಿಕ್ಷಕಿಯರಾದ ನಂದಿನಿ, ನೀಲಾಂಬರಿ, ಹಾಗೂ ಶಶಿಕಲಾ ರವರಿಗೆ ಗಂಭೀರ ಗಾಯಗಳಾಗಿದೆ. ಬಸ್ಸಿನಲ್ಲಿ 29 ಪ್ರಯಾಣಿಕರಿದ್ದು ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ..
Also read: ಜೀವ-ದೇವ ಅದ್ವೈತಕ್ಕೆ ಜೀವ-ಜೀವಗಳ ಅದ್ವೈತ ಪೀಠಿಕೆ: ರಾಘವೇಶ್ವರ ಶ್ರೀ
ಗಾಯಗೊಂಡವರನ್ನು ಕೂಡಲೇ ಅಂಬ್ಯುಲೆನ್ಸ್ ಮೂಲಕ ನಗರ, ಹೊಸನಗರ ಆಸ್ಪತ್ರೆಗೆ ಹಾಗೂ ಹೆಚ್ಚು ಗಾಯಗೊಂಡವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಪೊಲೀಸರೊಂದಿಗೆ ಕೈಜೋಡಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post