ಕಲ್ಪ ಮೀಡಿಯಾ ಹೌಸ್
ರಿಪ್ಪನ್’ಪೇಟೆ: ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಪಟ್ಟಣದಲ್ಲಿಂದು ಮಾತನಾಡಿದ ಅವರು, ಪುತ್ತೂರು ತಾಲೂಕಿನ ಕಡಬದಲ್ಲಿ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಗ್ರಾಮ ಸ್ವಾರಾಜ್ ರಥವನ್ನು ತಡೆದು ವೀರ ಸಾವರ್ಕರ್ ಫೋಟೋ ತೆಗೆದು, ಟಿಪ್ಪು ಅಳವಡಿಸಬೇಕು ಎಂದು ಪುಂಡಾಟ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಈಗಾಗಲೇ ಸೂಚಿಸಲಾಗಿದೆ ಎಂದರು.
ಇನ್ನು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಗೆ ನಮ್ಮ ಆದ್ಯತೆ. ಇದನ್ನು ಕದಡುವವರ ವಿರುದ್ಧ ಯಾವುದೇ ರೀತಿಯ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post