No Result
View All Result
60% of Indians have received an invite to a dating app or site later found to be fake
English Articles

60% of Indians have received an invite to a dating app or site later found to be fake

by ಕಲ್ಪ ನ್ಯೂಸ್
February 12, 2026
0

Kalpa Media House  |  India | Today, McAfee released its annual Valentine’s Day research, revealing how fake profiles, AI‑assisted chats,...

Read moreDetails
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
  • Advertise With Us
  • Grievances
  • About Us
  • Contact Us
Friday, February 13, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ರಿಪ್ಪನ್’ಪೇಟೆ: ಕೋಲ್ಡ್‌ ಸ್ಟೋರೇಜ್ ಸ್ಥಾಪನೆಗೆ ಭೀಮೇಶ್ವರ ಜೋಷಿ ಶ್ಲಾಘನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 12, 2019
in Small Bytes, ಹೊಸನಗರ
0
Share on FacebookShare on TwitterShare on WhatsApp

ಸುದ್ಧಿ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ರಿಪ್ಪನ್’ಪೇಟೆ: ಜಿಲ್ಲೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ರೈತರಿಗೆ ಅನುಕೂಲ ಕಲ್ಪಿಸಬೇಕೆಂಬ ಸುದುದ್ದೇಶದಿಂದ ಶ್ರೀ ಶಾರದಾ ವಿವಿಧೋದ್ದೇಶ ಸೌಹಾರ್ದ ಸಹಕಾರಿಯು ಶಿಥಲೀಕರಣ ಘಟಕ (ಕೋಲ್ಡ್‌ ಸ್ಟೋರೇಜ್) ಸ್ಥಾಪನೆ ಮಾಡಿರುವುದು ಶ್ಲಾಘನೀಯ  ಕಾರ್ಯ ಎಂದು ಶ್ರೀಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿ ಡಾ.ಜಿ. ಭೀಮೇಶ್ವರ ಜೋಷಿ ಹೇಳಿದರು.

ಶ್ರೀಶಾರದಾ ವಿವಿಧೋದ್ದೇಶ ಸೌಹಾರ್ದ ಸಹಕಾರಿ ವತಿಯಿಂದ ಹೊಸನಗರ ತಾಲೂಕು ರಿಪ್ಪನ್‌ಪೇಟೆ ಎಪಿಎಂಸಿ ಆವರಣದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಶ್ರೀಶಾರದಾ ಸೌಹಾರ್ದ ಕೋಲ್ಡ್‌ ಸ್ಟೋರೇಜ್ (ಶೀತಲೀಕರಣ ಘಟಕ) ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಕೆಲ ರೈತರಲ್ಲಿ ಕೆಟ್ಟ ಚಿಂತನೆ ಇದೆ. ಬಹುತೇಕ ರೈತರು ಮನೆ ಬಾಗಿಲಿಗೆ ಬರುವ ಮಧ್ಯವರ್ತಿಗಳಿಗೆ ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡುತ್ತಾರೆ. ಹಲವು ಬಾರಿ ವಂಚನೆಗೆ ಒಳಗಾಗಿದ್ದಾರೆ. ಇದು ತಪ್ಪಬೇಕು. ರೈತರು ಬೆಳೆದ ಬೆಳೆಗೆ ಉತ್ತಮ ಧಾರಣೆ ದೊರಕಬೇಕು. ಬೆಳೆ ಕೆಡೆದಂತೆ ಶೇಖರಿಸಿಡುವುದರ ಮೂಲಕ ಮಾರುಕಟ್ಟೆಯಲ್ಲಿ ಉತ್ತಮ ಧಾರಣ ದೊರಕಿದಾಗಿ ಮಾರಾಟ ಮಾಡಬೇಕು. ಇದಕ್ಕಾಗಿಯೇ ಶಾರದಾ  ವಿವಿಧೋದ್ದೇಶ ಸೌಹಾರ್ದ ಸಹಕಾರಿ ರೈತರಿಗೆ ನೆರವಾಗುವ ಉದ್ದೇಶದಿಂದ ಕೋಲ್ಡ್‌ ಸ್ಟೋರೇಜ್‌ನ್ನು ನಿರ್ಮಿಸಿದೆ. ರೈತರು ಘಟಕದ ಸದುಪಯೋಗ ಪಡೆದುಕೊಳ್ಳಬೇಕು. ಜತಗೆ, ಸೌಹಾರ್ದ ಸಹಕಾರಿಯನ್ನು ಬಲಪಡಿಸಬೇಕೆಂದರು.


ರೈತರು ನೆಮ್ಮದಿಯಿಂದ ಇದ್ದಾರೆ ದೇಶ ನೆಮ್ಮದಿಯಾಗಿ ಇರುತ್ತದೆ ಎಂಬುದನ್ನು ಮರೆಯಬಾರದು. ಸರ್ಕಾರ ರೈತರ ಸಂಕಷ್ಟ ನಿವಾರಿಸಲು ಕ್ರಮ ಕೈಗೊಳ್ಳಬೇಕಿದೆ. ರೈತರ ಬವಣೆ, ಸಂಕಷ್ಟ ಸಾಕಷ್ಟಿದೆ. ಪ್ರಕೃತಿ ವಿಕೋಪದಿಂದ ರೈತರು ತೊಂದರೆಗೆ ಒಳಗಾಗಿದ್ದಾರೆ. ಬೆಳೆದ ಬೆಳೆ ಸಿಗುತ್ತದೋ, ಇಲ್ಲವೋ ಎಂಬ ಆತಂಕದಲ್ಲಿ, ಸಂದಿಗ್ಧ ಪರಿಸ್ಥಿತಿಯಲ್ಲಿ ರೈತರು ಜೀವನ ನಡೆಸುತ್ತಿದ್ದರೂ ಆತ್ಮವಿಶ್ವಾಸ ಕಳೆದುಕೊಂಡಿಲ್ಲ. ಇಂತಹ ಸಂದರ್ಭದಲ್ಲಿ ರೈತಾಪಿ ವರ್ಗಕ್ಕೆ ಧೈರ್ಯ ತುಂಬುವ ಕೆಲಸ ಇನ್ನಷ್ಟು ನಡೆಯಬೇಕಿದೆ ಎಂದರು.

ಒಂದು ಕಡೆ ಬೆಲೆ ಕುಸಿತ, ಮತ್ತೊಂದು ಬೆಳೆ ನಾಶದಿಂದಾಗಿ ರೈತರು ಕಂಗಾಲಾಗಿ ಹೋಗಿದ್ದಾರೆ. ರೈತರ ಸಂಕಷ್ಟ  ಪರಿಹರಿಸಲು  ಸರ್ಕಾರ ಕಟಿಬದ್ಧ  ನಿರ್ಣಯ ಕೈಗೊಳ್ಳಬೇಕು. ಬದುಕಲು ಪೂರಕವಾದ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಆತಂಕ ನಿವಾರಿಸಬೇಕಿದೆ. ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಸುಪ್ರೀಂಕೋರ್ಟ್ ಸಲ್ಲಿಕೆಯಾಗಿರುವ ಪ್ರಮಾಣಪತ್ರವನ್ನು ಶಾಶ್ವತವಾಗಿ ವಾಪಸ್ಸು ಪಡೆಯುವ ದೃಢ ನಿರ್ಧಾರ ತೆಗೆದಿಕೊಳ್ಳಬೇಕು. ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಈ ನಿಟ್ಟಿನಲ್ಲಿ ಒಗ್ಗಟ್ಟಾಗಿ ಅಡಿಕೆ ಬೆಳೆಗಾರರ ಪರ ಕೇಂದ್ರ ಸರ್ಕಾರದ ಗಮನ ಸೆಳೆಯಬೇಕೆಂದು ಒತ್ತಾಯಿಸಿದರು.

ಕಂದಾಯ ಮತ್ತು ಅರಣ್ಯ ಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗೊಂದಲವಿದೆ. ದೇಶಕ್ಕೆ ಸ್ವಾತಂತ್ರ ಬಂದ ದಿನದಿಂದಲೂ ಗೊಂದಲ ಹಾಗೆಯೇ ಮುಂದುವರೆದಿದೆ. ಶೀಘ್ರವಾಗಿ ಗೊಂದಲ ಬಗೆಹರಿಯಬೇಕು. ರೈತರನ್ನು ಒಕ್ಕಲೆಬ್ಬಿಸುವ ಕಾರ್ಯ ಶಾಶ್ವತವಾಗಿ ನಿಲ್ಲಬೇಕು. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಸೋಲಾರ್ ಕಾಮಗಾರಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಶಿತಲೀಕರಣ ಘಟಕ ನಿರ್ಮಾಣ ಮಾಡುವ ಮೂಲಕ ರೈತರಿಗೆ ಆಶಾಕಿರಣವಾಗುವ ಯೋಜನೆಯನ್ನು ಶಾರದ ವಿವಿದ್ದೋದ್ದೇಶ ಸಹಕಾರಿ ಕೈಗೊಂಡಿದೆ. ಬೆಳೆದ ಬೆಳೆಯನ್ನು ಮಧ್ಯವರ್ತಿಗಳಿಗೆ ನೀಡದೆ, ಘಟಕದಲ್ಲಿ ಬೆಳೆಯನ್ನು ಶೇಖರಿಸಿಟ್ಟುಕೊಂಡು ಮಾರುಕಟ್ಟೆಯಲ್ಲಿ ಉತ್ತಮ ಧಾರಣೆ ಬಂದ ಸಂದರ್ಭದಲ್ಲಿ ಮಾರಾಟ ಮಾಡಿ, ಲಾಭ ಗಳಿಸಬೇಕೆಂದು ಸಲಹೆ ನೀಡಿದರು.

ಹಿತ ಚಿಮತನೆ ಇದ್ದಲ್ಲಿ ಯಾವುದೇ ಒಂದು ಸಂಸ್ಥೆ ಹೆಮ್ಮರವಾಗಿ ಬೆಳೆಯಲು ಸಾಧ್ಯ. ಸ್ವಾರ್ಥ, ಸ್ವಹಿತ ಚಿಂತನೆ ಇದ್ದಲ್ಲಿ ಸಂಸ್ಥೆಯ ಪ್ರಗತಿ ಕುಂಠಿತವಾಗುತ್ತದೆ. ಆದರೆ ಶಾರದ ವಿವಿದ್ದೋದ್ದೇಶ  ಸಹಕಾರಿ ಕಡಿಮೆ ಅವಽಯಲ್ಲಿ ಹೆಚ್ಚಿನ ಬೆಳವಣಿಗೆ ಕಾಣುತ್ತಿದೆ. ಇದಕ್ಕೆ ಸಹಕಾರಿಯ ಆಡಳಿತ ಮಂಡಿಳಿ ಹಾಗೂ ನೌಕರ ವರ್ಗದವರ ಪಾತ್ರ ಪ್ರಮುಖವಾದದು ಎಂದರು.

ಸಾಗರ ಕ್ಷೇತ್ರ ಶಾಸಕ ಹರತಾಳು ಹಾಲಪ್ಪ ಮಾತನಾಡಿ, ಅಡಕೆ ಬೆಳೆಗಾರರ ಬಹುದಿನದ ಬೇಡಿಕೆಯಂತೆ ಶಾಸಕ ಅರಗ ಜ್ಞಾನೇಂದ್ರ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್ ರಚನೆಯಾಗಿದೆ. ಹಾಗೆಯೇ ಹೊಸನಗರ ತಾಲೂಕು ನಾಗೋಡಿಯಲ್ಲಿ ಮಂಕಿಪಾರ್ಕ್ ನಿರ್ಮಾಣ ಪ್ರಯತ್ನ ನಡೆಸಲಾಗಿದೆ. ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡುತ್ತಿದೆ ಎಂದರು.


ತೀರ್ಥಹಳ್ಳಿ ಕ್ಷೇತ್ರ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ,  ರಾಜಕಾರಣವನ್ನು ಮೀರಿ ದೇಶದ ಪ್ರಗತಿ ಕುರಿತು ಚಿಂತನೆ ನಡೆಸಬೇಕು. ಇಲ್ಲವಾದಲ್ಲಿ ದೇಶಕ್ಕೆ ಅಪಾಯ ಉಂಟಾಗಲಿದೆ. ರೆಸಿಪ್ ಒಪ್ಪಂದಕ್ಕೆ ಪ್ರದಾನಿ ನರೇಂದ್ರ ಮೋದಿ ಸಹಿ ಹಾಕದೆ ರೈತರ ಪರ ನಿಲುವು ಪ್ರಕಟಿಸಿದ್ದಾರೆ ಎಂದರು.

ಶಾರದ ವಿವಿದೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ಹೆಚ್.ಎಸ್. ಶಿವಶಂಕರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೌಹಾರ್ಧ ಸಹಕಾರಿ ರೈತರ ಪರವಾಗಿ ಕೆಲಸ ಮಾಡುತ್ತಿದೆ ಎನ್ನುವುದು ನಮ್ಮ ಹೆಮ್ಮೆ. ಇದೇ ರೀತಿ ಇದೀಗ ಐದನೇ ಶಾಖೆಯಾಗಿ ರಿಪ್ಪನ್‌ಪೇಟೆಯಲ್ಲಿ ಕಾಲಿಟ್ಟಿದ್ದು, ಸಹಕಾರಿಯೊಂದಕ್ಕೆ ದೊಡ್ಡ ಸವಾಲು ಎನ್ನುವಂತಹ 10 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಿದ್ದೇವೆ. ರೈತರಿಗೆ ಇದು ಉಪಯೋಗವಾಗುತ್ತದೆ ಎಂಬ ನಂಬಿಕೆ ನಮ್ಮದು ಎಂದರು.

ಇದೇ ಸಂದರ್ಭದಲ್ಲಿ ಶ್ರೀಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿ ಡಾ.ಜಿ. ಭೀಮೇಶ್ವರ ಜೋಷಿ ಅವರನ್ನು ಶಾರದಾ ವಿವಿಧೋದ್ದೇಶ ಸೌಹಾರ್ದ ಸಹಕಾರಿ ವತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಮ್‌ಕೋಸ್ ಉಪಾಧ್ಯಕ್ಷ ವೈ.ಎಸ್. ಸುಬ್ರಹ್ಮಣ್ಯ, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಎಚ್.ಆರ್. ಯೋಗೇಶ್, ಜಿಪಂ ಸದಸ್ಯರಾದ ಶ್ವೇತಾ ಬಂಡಿ, ಕಲಗೋಡು ರತ್ನಾಕರ್, ಸುರೇಶ್ ಸ್ವಾಮಿರಾವ್, ತಾಪಂ ಅಧ್ಯಕ್ಷ ವಾಸಪ್ಪಗೌಡ, ತಾಪಂ ಸದಸ್ಯ ಎನ್. ಚಂದ್ರೇಶ್, ಗ್ರಾಪಂ ಅದ್ಯಕ್ಷೆ ಶಾರದಾ ಹಿರಿಯಣ್ಣ, ಹೊಸನಗರ ಎಪಿಎಂಸಿ ಅಧ್ಯಕ್ಷ ಹೆಚ್.ವಿ. ಈಶ್ವರಪ್ಪ ಗೌಡ, ಉಪಾಧ್ಯಕ್ಷ ಕುಬೇರನಾಯ್ಕ್‌, ಸದಸ್ಯ ಬಿ.ಪಿ. ರಾಮಚಂದ್ರ, ಡಿಸಿಸಿ ಬ್ಯಾಂಕ್ ನಿರ್ಧೇಶಕರಾದ ಚನ್ನವೀರಪ್ಪ ಮತ್ತಿತರರು ಉಪಸ್ಥಿತರಿದ್ದರು.

ಸೌಹಾರ್ಧ ಸಹಕಾರಿ ನಿದೇಶಕ ಜಿ.ಕೆ. ರಮಾಕಾಂತ್ ಸ್ವಾಗತಿಸಿದರು, ಗೋಪಾಲ್ ಎಸ್ ಯಡಗೆರೆ ಪ್ರಾಸ್ತಾವಿಕವಾಗಿ ಮಾತನಾಡಿದರು, ಸುಧ ಪ್ರಾರ್ಥಿಸಿದರು.

(ವರದಿ: ಡಾ.ಸುಧೀಂದ್ರ, ಶಿವಮೊಗ್ಗ)

Get In Touch With Us info@kalpa.news Whatsapp: 9481252093

Tags: Cold storageDr.G. Bheemeshwara JoshiKannada NewsMalnad NewsMP B Y Raghavendraripponpetಕೋಲ್ಡ್‌ ಸ್ಟೋರೇಜ್ಡಾ.ಜಿ. ಭೀಮೇಶ್ವರ ಜೋಷಿರಿಪ್ಪನ್'ಪೇಟೆಶಿಥಲೀಕರಣ ಘಟಕಸಂಸದ ಬಿ.ವೈ. ರಾಘವೇಂದ್ರ
Share201Tweet123Send
Previous Post

ನಿವೃತ್ತಿಗೆ ಮೊದಲು ಮತ್ತೆ ಹಲವು ಐತಿಹಾಸಿಕ ತೀರ್ಪು ನೀಡಲಿದ್ದಾರಾ ಸಿಜೆಐ ರಂಜನ್ ಗೊಗೋಯ್?

Next Post

ಎಚ್ಚರಿಕೆ ಹಸಿಕಸ, ಒಣಕಸ ವಿಂಗಡಿಸದೇ ಹಾಕಿದ್ದಲ್ಲಿ ಶೀಘ್ರದಲ್ಲೇ ದಂಡ ಗ್ಯಾರೆಂಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಚ್ಚರಿಕೆ ಹಸಿಕಸ, ಒಣಕಸ ವಿಂಗಡಿಸದೇ ಹಾಕಿದ್ದಲ್ಲಿ ಶೀಘ್ರದಲ್ಲೇ ದಂಡ ಗ್ಯಾರೆಂಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

February 13, 2026
ಕನ್ನಡಿಗ ರಾಷ್ಟ್ರಕವಿಗಳ ಸಾಹಿತ್ಯ ಕೊಡುಗೆಯನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು: ಸುರೇಶ್ ಋಗ್ವೇದಿ

ಕನ್ನಡಿಗ ರಾಷ್ಟ್ರಕವಿಗಳ ಸಾಹಿತ್ಯ ಕೊಡುಗೆಯನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು: ಸುರೇಶ್ ಋಗ್ವೇದಿ

February 13, 2026
ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಆರೋಪ | ಕರವೇ ಜನಮನ ರಾಜ್ಯ ಸಂಘಟನೆ ಪ್ರತಿಭಟನೆ

ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಆರೋಪ | ಕರವೇ ಜನಮನ ರಾಜ್ಯ ಸಂಘಟನೆ ಪ್ರತಿಭಟನೆ

February 13, 2026
ಕಿರುಚಿತ್ರೋತ್ಸವದಲ್ಲಿ ಮಿಂಚಿದ ‘ನೀರೆಲ್ಲವೂ ತೀರ್ಥ’

ಕಿರುಚಿತ್ರೋತ್ಸವದಲ್ಲಿ ಮಿಂಚಿದ ‘ನೀರೆಲ್ಲವೂ ತೀರ್ಥ’

February 13, 2026
ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

February 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL