ಕಲ್ಪ ಮೀಡಿಯಾ ಹೌಸ್ | ರಿಪ್ಪನ್’ಪೇಟೆ |
ಕಳ್ಳತನದ ಆರೋಪಿಯೊಬ್ಬ ಪೊಲೀಸ್ ಠಾಣೆಯ ಸಿಬ್ಬಂದಿ ಮೇಲೆಯೇ ಹಲ್ಲೆ ಎಸಗಿ ಕಾಂಪೌಂಡ್ ಹಾರಿ ಪರಾರಿಯಾಗಿರುವ ಘಟನೆ ನಡೆದಿದೆ.
ಸಾಗರ ರಸ್ತೆಯ ಉದ್ಯಮಿಯೊಬ್ಬರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್ ಕಳ್ಳತನವಾಗಿತ್ತು. ಈ ಪ್ರಕರಣದಲ್ಲಿ ಸಂಶಯ ಆಧಾರದಲ್ಲಿ ವಡಗೆರೆ ನಿವಾಸಿಯೊಬ್ಬನನ್ನು ಪತ್ತೆ ಮಾಡಿ ವಿಚಾರಣೆಗಾಗಿ ಠಾಣೆಗೆ ಒಪ್ಪಿಸಲಾಗಿತ್ತು.
ಬೆಳಗ್ಗೆ ಶೌಚಾಲಯಕ್ಕೆ ಹೋದವನು ಹೊರಬರುತ್ತಿದ್ದಂತೆ ಅಲ್ಲೆ ಇದ್ದ ಸಿಬ್ಬಂದಿಯ ಮೇಲೆ ಹಲ್ಲೆ ಎಸಗಿ ಕಾಂಪೌಂಡ್ ಗೋಡೆ ಹಾರಿ ಪರಾರಿಯಾಗಿದ್ದಾನೆಂದು ಹೇಳಲಾಗಿದೆ.
Also read: ಎಲ್ಲ ಹಿಂದೂ ಧಾರ್ಮಿಕ ಕೇಂದ್ರಗಳು ಕೋರ್ಟ್ ಆದೇಶ ಪಾಲಿಸಬೇಕು: ಪೇಜಾವರ ಶ್ರೀ ಕರೆ
ಪರಾರಿಯಾದ ಆರೋಪಿಯು ಮರಳು ದಂಧೆಯಲ್ಲಿ ಶಾಮೀಲಾಗಿರುವ ಇವನು ಈ ರೀತಿಯಲ್ಲಿ ಠಾಣೆಯಿಂದ ಪರಾರಿಯಾಗಿರುವ ಬಗ್ಗೆ ಸಾರ್ವಜನಿಕರಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post