ಕಲ್ಪ ಮೀಡಿಯಾ ಹೌಸ್ | ರಿಪ್ಪನ್‌ಪೇಟೆ |
2ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ.
ಹೌದು, ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದ ಜಗನ್ನಾಥ ಮತ್ತು ಆಶಾ ದಂಪತಿಗಳ ಪುತ್ರ ಆರ್ಯನ್ ಬಿ.ಜೆ (7) ಸ.ಹಿ.ಪ್ರಾ.ಶಾಲೆ ಬಸವಾಪುರದಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದು ಹಠಾತ್ತನೆ ಮೆದುಳು ರಕ್ತಸ್ರಾವದಿಂದ ನಿನ್ನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾನೆ.
ಪುನೀತ್ ರಾಜ್‍ಕುಮಾರ್ ನಂತೆ ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ.
ಈತನ ತಾಯಿ ಆಶಾ ಅದೇ ಶಾಲೆಯಲ್ಲಿ ಅಡುಗೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಈತನ ಪೋಷಕರು ಆರ್ಯನ್ ನ ಅಂಗಾಂಶ ದಾನ ಮಾಡಲು ಮುಂದಾಗಿದ್ದರು ಆದರೆ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿದ್ದರಿಂದ ಸಾಧ್ಯವಾಗದೆ ನೇತ್ರದಾನ ಮಾಡಿ ಇಬ್ಬರು ಅಂಧರ ಬಾಳಿಗೆ ಬೆಳಕು ನೀಡಿದ್ದಾರೆ.
ಈತನ ಸಾವಿಗೆ ಬಸವಾಪುರ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ತೀವ್ರ ಸಂತಾಪ ವ್ಯಕ್ತಪಡಿಸಿ ಮೃತನ ಆತ್ಮಕ್ಕೆ ಶಾಂತಿ ಕೋರಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















