ಕಲ್ಪ ಮೀಡಿಯಾ ಹೌಸ್ | ರಿಪ್ಪನ್ ಪೇಟೆ |
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ.
ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿರುವ ಸಂಧರ್ಭದಲ್ಲಿ ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಏಕಾಏಕಿ ಕೆರೆಗೆ ಉರುಳಿಬಿದ್ದಿದೆ. ಈ ಸಂದರ್ಭದಲ್ಲಿ ರಸ್ತೆಯಲ್ಲಿ ಹಾದುಹೋಗುತಿದ್ದ ಸಾರ್ವಜನಿಕರು ಕೂಡಲೇ ಸಹಾಯಕ್ಕೆ ತೆರಳಿ ಇಬ್ಬರನ್ನು ರಕ್ಷಿಸಿದ್ದಾರೆ ಆದರೆ ಅಷ್ಟರಲ್ಲಾಗಲೇ ವೃದ್ದೆ ಮೃತಪಟ್ಟಿದ್ದರು ಎನ್ನಲಾಗಿದೆ.

ಕಾರಿನಲ್ಲಿ ಮೂವರು ತೆರಳುತಿದ್ದು, ಯುವಕ ಹಾಗೂ ಓರ್ವ ಯುವತಿಯನ್ನು ಸ್ಥಳೀಯರು ತಮ್ಮ ಸಮಯ ಪ್ರಜ್ಞೆಯಿಂದ ತಮ್ಮ ಜೀವದ ಹಂಗು ತೊರೆದು ಕಾಪಾಡಿ ತಕ್ಷಣ ಸ್ಥಳಿಯ ಆಸ್ಪತ್ರೆಗೆ ಗಾಯಾಳುಗಳನ್ನು ಕರೆತಂದಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.

ಪ್ರಾಣದ ಹಂಗು ತೊರೆದು ಇಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾದ ಗಿರೀಶ್ , ಇಮ್ರಾನ್ ಹಾಗೂ ಮುತ್ತಲೀಬ್ ರವರಿಗೆ ಪೋಸ್ಟ್ ಮ್ಯಾನ್ ನ್ಯೂಸ್ ಬಳಗದಿಂದ ಅಭಿನಂದನೆಗಳು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post